ಕ್ರೀಡೆಯಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ

t sss
ಕುಂಟಿನಮಡು ಗ್ರಾಮದಲ್ಲಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಶಾಸಕ ಜಿ.ಎಚ್.ಶ್ರೀನಿವಾಸ್ ಚಾಲನೆ ನೀಡಿದರು. ಕೆ.ಆರ್.ಧ್ರುವಕುಮಾರ್, ಕೆ.ಎಂ.ಸಂತೋಷ್, ಪುಟ್ಟನಾಯ್ಕ, ಕೆ.ಎಸ್.ನಂಜುಂಡಪ್ಪ ಇತರರಿದ್ದರು.
Published on

ತರೀಕೆರೆ: ಕ್ರೀಡಾ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿದರೆ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ಆಗಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಕುಂಟಿನಮಡು ಗ್ರಾಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಕಲಿಕೆ ಹಂತದಲ್ಲಿ ಕ್ರೀಡೆ, ಸಾಹಿತ್ಯ, ಸಂಗೀತದಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ಇವೆಲ್ಲವೂ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುವುದರ ಜತೆಗೆ ದೈಹಿಕ ಮತ್ತು ಮಾನಸಿಕ ಸದೃಢಕ್ಕೆ ಪೂರಕವಾಗಲಿದೆ ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟನಾಯ್ಕ, ಜಿಪಂ ಮಾಜಿ ಅಧ್ಯಕ್ಷ ಕೆ.ಆರ್.ಧ್ರುವಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಸಂತೋಷ್, ಸಿಬಿಸಿ ಉಪಾಧ್ಯಕ್ಷ ಕೆ.ಎಸ್.ನಂಜುಂಡಪ್ಪ, ಸದಸ್ಯ ಎಸ್.ಎಂ.ರುದ್ರಪ್ಪ, ಪ್ರಾಚಾರ್ಯ ಸಿ.ಎನ್.ಶಿವಪ್ಪ, ಗ್ರಾಮಸ್ಥರಾದ ಕೆ.ಎಸ್.ಕಾಂತರಾಜ್, ಕೆ.ವಿ.ಶಿವಪ್ಪ, ಕೆ.ವಿ.ಮಂಜುನಾಥ್, ಕೆ.ಎಂ.ಅಣ್ಣಪ್ಪ, ಕೆ.ಎಂ.ನವೀನ್, ಹೊನ್ನಪ್ಪ, ಕೆ.ಸಿ.ಪರಮೇಶ್ವರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net