

ಸೋಮವಾರಪೇಟೆ: ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಪತ್ರಕರ್ತರಿಗೆ ಕ್ರೀಡಾ ಸ್ಪರ್ಧೆ ಅ.26ರಂದು ಪತ್ರಿಕಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಪಿ. ಲೋಕೇಶ್ ಹೇಳಿದ್ದಾರೆ.
ಕೊಡಗು ಪತ್ರಕರ್ತರ ಸಂಘದ ಸದಸ್ಯರಿಗೆ ಕೇರಂ ಸಿಂಗಲ್ಸ್ ಮತ್ತು ಡಬಲ್ಸ್, ಚೆಸ್ ಸ್ಪರ್ಧೆ ನಡೆಯಲಿದೆ. ಅಂದು ಸಂಜೆ ಕುಟುಂಬಸ್ಥರಿಗೆ ವಿವಿಧ ಕ್ರೀಡಾ ಸ್ಪರ್ಧೆ ನಡೆಯಲಿದೆ. ನಂತರ ವಾರ್ಷಿಕೋತ್ಸವ, ವಾರ್ಷಿಕ ಪ್ರಶಸ್ತಿ ಪ್ರದಾನ ನಡೆಯಲಿದೆ. ಆಸಕ್ತರು ಅ. 23ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು.