

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿಕಲಚೇತನ ಮಕ್ಕಳು, ಪುನರ್ವಸತಿ ಕಾರ್ಯಕರ್ತರು ಹಾಗೂ ವಿಕಲಚೇತನ ಸಾರ್ವಜನಿಕರಿಗೆ ವಿವಿಧ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿದೆ. ನವನಗರ ಸುತಗಟ್ಟಿಯ ಡಾನ್‌ಬಾಸ್ಕೋ ವಸತಿಯುತ ಶಾಲೆಯಲ್ಲಿ ನ. 20ರಂದು ಬೆಳಗ್ಗೆ.9ರಿಂದ ಸಂಜೆ 4.30ರವರೆಗೆ ವಿಶೇಷ ಶಾಲೆಗಳ ಮಕ್ಕಳಿಗಾಗಿ ಸ್ಪರ್ಧೆ ಜರುಗಲಿವೆ. 21ರಂದು ಬೆಳಗ್ಗೆ 9ರಿಂದ ಸಂಜೆ 4.30ರವರೆಗೆ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಪುನರ್ವಸತಿ ಕಾರ್ಯಕರ್ತರು ಹಾಗೂ ವಿಕಲಚೇತನ ಸಾರ್ವಜನಿಕರಿಗೆ ಕ್ರೀಡಾಕೂಟ ನಡೆಸಲಾಗುವುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಽಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.