ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ

Sports contribute to mental and physical development
Sports contribute to mental and physical development
Published on

ಚಿಮ್ಮಡ:  ಆರೋಗ್ಯ ಸದೃಢವಾಗಿರಿಸಲು ಗ್ರಾಮೀಣ ಭಾಗದಲ್ಲಿ ಕಬಡ್ಡಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕಬಡ್ಡಿ ಆಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ವ್ಯಾಯಾಮ ದೊರೆಯುತ್ತದೆ ಎಂದು ವಿರಕ್ತಮಠದ ಪ್ರಭು ಪ್ರಭು ಸ್ವಾಮೀಜಿ ಹೇಳಿದರು.

ಗ್ರಾಮದ ಪಿಕೆಪಿಎಸ್ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಜಮಖಂಡಿ ಕ್ಷೇತ್ರ ಶಿಕ್ಷಣಾಽಕಾರಿಗಳ ಕಾರ್ಯಾಲಯ ಹಾಗೂ ಭೂಮಿಕಾ ಪ್ರೌಢಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಬೆಳಗಾವಿ ವಿಭಾಗಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

ಮಾನಸಿಕ ಹಾಗೂ ದೈಹಿಕ ಶಕ್ತಿಯ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ. ವಯಸ್ಸಿನ ಬೇಧವಿಲ್ಲದೆ ಎಲ್ಲರೂ ನಿತ್ಯ ಕ್ರೀಡೆಯಲ್ಲಿ ಭಾಗವಹಿಸಬೇಕು. ಉತ್ಸಾಹದಿಂದ ಜೀವನ ಸಾಗಿಸಲು ಸಾಧ್ಯವಿದೆ ಎಂದರು.

ಕವಿತಾ ಕೊಣ್ಣೂರ ಮಾತನಾಡಿ, ಕಬಡ್ಡಿ ಉಳಿಸಿ, ಬೆಳೆಸಬೇಕು. ಕಬಡ್ಡಿ ಗ್ರಾಮೀಣ ಕ್ರೀಡೆಯಾಗಿದ್ದು, ದೇಶದ ರಾಷ್ಟಿçÃಯತೆ ಮತ್ತು ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಸೂರ್ತಿಯಿಂದ ಪಾಲ್ಗೊಳ್ಳುವುದು ಮುಖ್ಯ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಽಕಾರಿ ಎ.ಕೆ. ಬಸಣ್ಣವರ, ಮುಖಂಡ ವಿದ್ಯಾಧರ ಸವದಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಂಗಾರೆವ್ವ ಜಾಲಿಕಟ್ಟಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಜನಾರ್ದನ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪದ್ಮಾವತಿ ಭಜಂತ್ರಿ, ಪಿಕೆಪಿಎಸ್ ಅಧ್ಯಕ್ಷ ಚನ್ನಪ್ಪ ಬಿಳ್ಳೂರ, ಗ್ರಾ.ಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಪ್ರಭು ಪಾಲಬಾವಿ, ಬೀರಪ್ಪ ಹಳೆಮನಿ, ಬಸವರಾಜ ಕುಂಚನೂರ, ವಿಜಯಕುಮಾರ ಪೂಜಾರಿ, ಮಹಾಲಿಂಗ ಮಾಯನ್ನವರ, ಅಶೋಕ ಮೋಟಗಿ, ಎಚ್.ಎಸ್.ಮಿರ್ಜಿ, ಮುತ್ತು ಢವಳೇಶ್ವರ, ರಾಜು ಬಗನಾಳ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net