ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ

FotoJet (4)
Published on

ಪಾವಗಡ: ವಿದ್ಯಾರ್ಥಿಗಳ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯ ಹೆಚ್ಚಿಸುವಲ್ಲಿ ಕ್ರೀಡೆಗಳು ಸಹಾಯಕಾರಿಯಾಗಿದ್ದು, ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆಗೆ ಪೂರಕವಾಗಿವೆ ಎಂದು ಕ್ಷೇತ್ರದ ಬಿಇಒ ರೇಣುಕಮ್ಮ ಹೇಳಿದರು.

ತಾಲೂಕಿನಲ್ಲಿ ಆಯೋಜಿಸಿದ್ದ ಹಿರಿಯ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು. ಮಾನಸಿಕವಾಗಿ ಸದೃಢರಾದಗ ಮಾತ್ರ ಶೈಕ್ಷಣಿಕವಾಗಿ ಸಾಧನೆ ಮಾಡಲು ಸಾಧ್ಯ ಎಂದರು.

ಕ್ರೀಡಾಕೂಟದಲ್ಲಿ ಸೋಲು&ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ತೀರ್ಪುಗಾರರು ಯಾವುದೇ ತಾರತಮ್ಯ ಮಾಡದೆ ಉತ್ತಮವಾಗಿ ಪ್ರತಿಭೆ, ಸಾಮರ್ಥ್ಯ ಇರುವ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೊತ್ಸಾಹ ನೀಡಬೇಕು ಎಂದರು.

ಬಿಆರ್​ಸಿ ವೆಂಕಟೇಶ್​ ಮಾತನಾಡಿ, ಕ್ರೀಡೆ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ವಿದ್ಯಾರ್ಥಿಗಳು ಓದಿನ ಜತೆ ಕ್ರೀಡೆಯಲ್ಲಿಯೂ ಸಹ ಭಾಗವಹಿಸಬೇಕು. ಕ್ರೀಡೆಯು ದೈಹಿಕ ಬೆಳವಣಿಗೆಯನ್ನು ಉತ್ತೇಜಿಸಿದರೆ, ಶಿಕ್ಷಣ ಬುದ್ಧಿ ಬೆಳವಣಿಗೆಯನ್ನು ಒದಗಿಸುತ್ತದೆ. ವಿದ್ಯಾರ್ಥಿಗಳ ಸಂಪೂರ್ಣ ವಿಕಸನಕ್ಕೆ ಪಠ್ಯ ಮತ್ತು ಕ್ರೀಡಾ ತರಬೇತಿ ಒಟ್ಟಿಗೆ ನೀಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net