

ಹೊಸಪೇಟೆ: ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಂದ ಶೈಕ್ಷಣಿಕ ಸಾಧನೆಯೂ ವೃದ್ಧಿಸುತ್ತದೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಟಿ.ಪಾಲಾಕ್ಷ ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ, ಟಿಎಂಎಇಎಸ್ ಅಕಾಡೆಮಿ ಆಫ್ ಸೈನ್ಸ್ ಅಂಡ್ ಕಾಮರ್ಸ್ ಕಾಲೇಜು ಸಹಯೋಗದಲ್ಲಿ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿ, ಸ್ಥಳೀಯ ವಿದ್ಯಾರ್ಥಿಗಳು ರಾಷ್ಟç ಮತ್ತು ಅಂತಾರಾಷ್ಟಿçÃಯ ಸ್ಪರ್ಧೆಗಳಲ್ಲಿ ಮಿಂಚುವAತಾಗಬೇಕು. ಅದಕ್ಕಾಗಿ ತಮ್ಮ ಇಷ್ಟದ ಕ್ರೀಡೆಯಲ್ಲಿ ನಿರಂತರ ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.
ಕ್ರೀಡಾಕೂಟದ ನೋಡಲ್ ಅಧಿಕಾರಿ ನಾಗರಾಜ್ ಹವಾಲ್ದಾರ್ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಭಾಗವಗಿಸುವಿಕೆ ಮುಖ್ಯ. ಸ್ಪರ್ಧೆಗಳಲ್ಲಿ ಆರೋಗ್ಯಕರ ಪೈಪೋಟಿ ನೀಡಬೇಕು ಎಂದು ಹೇಳಿದರು.
ಟಿಎಂಎಇಎಸ್ ಅಕಾಡೆಮಿ ಪಿಯು ಕಾಲೇಜಿನ ಪ್ರಾಚಾರ್ಯ ಪ್ರೊ.ವಿ.ಎಸ್.ದಯಾನಂದ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಪ್ರಾಚಾರ್ಯರ ಸಂಘದ ಕಾರ್ಯದರ್ಶಿ ಜೆ.ಸಿದ್ದರಾಮ, ಶ್ರೀಕಾಂತ ವಾಲ್ಕೀಕಿ, ಡಾ. ಸಂಗಮೇಶ ಎಸ್. ಗಣಿ, ಉಪನ್ಯಾಸಕಿ ಜ್ಯೋತಿ ಇದ್ದರು.