'ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಲು ಕ್ರೀಡಾಕೂಟ ಸಹಕಾರಿ'

8
Published on

ಮೈಸೂರು: ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ಮೈಸೂರು ತಾಲೂಕು ದೂರ ಗ್ರಾಮದಲ್ಲಿರುವ ಶ್ರೀಮಹದೇಶ್ವರ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಯಪುರ ಹೋಬಳಿ ಮಟ್ಟದ ಕ್ರೀಡಾ ಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡಾ ಕೂಟಗಳಿಂದ ವಿದ್ಯಾರ್ಥಿಗಳ ನಡುವೆ ಸಹೋದರ ಸಂಬಂಧ ಬೆಳೆಯಲಿವೆ. ಕ್ರೀಡೆಯ ಜತೆಗೆ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ರೂಡಿಸಿಕೊಳ್ಳಬೇಕು. ಯಾವ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬೆಳೆಸಿಕೊಳ್ಳುತ್ತಾನೋ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ಹೊರಹೊಮ್ಮುತ್ತಾನೆ ಎಂದರು.
ಬರಡನಪುರ ಮಠದ ಶ್ರೀಪರಶಿವಮೂರ್ತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ನಾಗರಾಜು, ಮುಖಂಡರಾದ ಹಿನಕಲ್ ಬಸವರಾಜು, ಎಂ.ಕುಮಾರ್, ನಂದೀಶ್ ಚಾಮುಂಡಯ್ಯ, ವಕೀಲ ಮಹೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net