ಜನಾರ್ದನ ಪೂಜಾರಿಯವರಿಗೆ ಕ್ರೀಡಾಕೂಟ ಆಮಂತ್ರಣ

Btw_Sports event
Published on

ಬಂಟ್ವಾಳ: ಕೋಟಿ-ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿಯಾಗಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಜನವರಿ 19ರಂದು ಜರುಗಲಿರುವ ಕೋಟಿ-ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಸ್ವೀಕರಿಸಿ ಮಾತಾಡಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ.ಸಂಜೀವ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಮೇಶ್ ಎಂ. ತುಂಬೆ, ಕೋಶಾಧಿಕಾರಿ ಆನಂದ ಸಾಲ್ಯಾನ್, ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಕೋಟಿ-ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ರಾಜೇಶ್ ಸುವರ್ಣ ರಾಜಲಕ್ಷ್ಮೀ, ಸುಂದರ ಪೂಜಾರಿ ಬೊಳಂಗಡಿ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಉಪಾಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಮಾಜಿ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net