ಕ್ರೀಡಾಕೂಟಗಳು ಸಮತೋಲನ ಕಾಪಾಡಲು ಸಹಕಾರಿ

21 ckm 1
ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಶಾಸಕ ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಎಚ್.ಸಿ.ರವೀಶ್, ಕೃಷ್ಣಮೂರ್ತಿ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಕ್ರೀಡಾಕೂಟ ವಿದ್ಯಾರ್ಥಿಗಳಿಗೆ ಶಾರೀರಿಕ ಹಾಗೂ ಮಾನಸಿಕವಾಗಿ ಸಮತೋಲನ ಕಾಪಾಡಲು ಸಹಕಾರಿ. ಹೀಗಾಗಿ ಪಠ್ಯದೊಂದಿಗೆ ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿಮುಖ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

ನಗರದ ಜಿಲ್ಲಾ ಆಟದ ಮೈದಾನದಲ್ಲಿ ಜಿಪಂ, ಶಾಲಾ ಶಿಕ್ಷಣ ಇಲಾಖೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ರ ಸಂಘ, ಪ್ರೌಡಶಾಲಾ ಸಹ ಶಿಕ್ಷಕರ ಸಂಘ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ನಿರಂತರವಾಗಿ ಭಾಗವಹಿಸುವುದರಿಂದ ಕ್ರೀಡಾಸಕ್ತಿ ಮೂಡಲಿದೆ. ಜೊತೆಗೆ ಆರೋಗ್ಯಯುತ ಶರೀರ ಪಡೆದುಕೊಳ್ಳಬಹುದು. ಕ್ರೀಡಾಕೂಟದಲ್ಲಿ ಹಲವಾರು ರೀತಿಯ ಕ್ರೀಡೆಗಳಿವೆ ಆಸಕ್ತಿ ಹೊಂದಿರುವ ಕ್ರೀಡೆಯಲ್ಲಿ ಸ್ಪರ್ಧಿಸುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯಾಗಬೇಕು ಎಂದು ಕಿವಿಮಾತು ಹೇಳಿದರು.
ಮಕ್ಕಳು ವಿದ್ಯಾರ್ಥಿದೆಸೆಯಿಂದಲೇ ಕ್ರೀಡೆಯಲ್ಲಿ ಭಾಗವಹಿಸುವ ಜೊತೆಗೆ ಕ್ರೀಡಾಮನೋಭಾವನೆ ರೂಢಿಸಿಕೊಳ್ಳಬೇಕು. ಗೆಲುವಿಗೆ ಮಾತ್ರ ಸೀಮಿತರಾಗದೇ ಸ್ಪರ್ಧಿಸುವ ಗುಣ ಬೆಳೆಸಿಕೊಳ್ಳಬೇಕು. ಇಂದು ಸೋತವರು ಮುಂದೊAದು ದಿನ ಗೆಲುವಿನ ನಗೆ ಬೀರುವುದರಲ್ಲಿ ಸಂಶಯವಿಲ್ಲ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ದಸರಾ ಕ್ರೀಡಾಕೂಟಕ್ಕೆ ಪುರಾತನ ಇತಿಹಾಸವಿದೆ. ನಾಡಹಬ್ಬದ ದಸರಾದ ವೇಳೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೂ ಕ್ರೀಡಾಕೂಟ ಆಯೋಜಿಸಲಾಗಿತ್ತು. ಹಿಂದಿನ ಕಾಲದಲ್ಲಿ ನಾಡಹಬ್ಬದಂದು ಕುಸ್ತಿ ನಡೆಯುತ್ತಿವು. ಇದೀಗ ಕ್ರೀಡಾಕೂಟ ಆಯೋಜಿಸಿ ದಸರಾ ವೈಭವವನ್ನು ಉಳಿಸುತ್ತಿದೆ ಎಂದರು.
ಇAದು ವಲಯಮಟ್ಟದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ಶ್ರಮಿವಿಟ್ಟು ಕ್ರೀಡೆಯಲ್ಲಿ ಆಟವಾಡಿದರೆ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಭಾಗವಹಿಸಬಹುದು. ಇದಕ್ಕೆ ವಿದ್ಯಾರ್ಥಿಗಳ ನಿರಂತರ ಪರಿಶ್ರಮ ಅಗತ್ಯ. ಇದರಿಂದ ಜಿಲ್ಲೆಯ ಹೆಸರಿನ ಕೀರ್ತಿ ಪತಾಕೆ ಎಲ್ಲೆಡೆ ರಾರಾಜಿಸುವಂತೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸಿ.ರವೀಶ್, ಶಿಕ್ಷಣ ಸಂಯೋಜಕ ಕೃಷ್ಣಮೂರ್ತಿ ರಾಜ್ ಅರಸ್, ತಾಲೂಕು ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ಗಂಗಾಧರ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಂ.ಮAಜುನಾಥ್, ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್-೧ ಅಧ್ಯಕ್ಷ ಶಂಕರೇಗೌಡ, ತಾಲೂಕು ಅಧ್ಯಕ್ಷ ಪ್ರವೀಣ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net