

ತ್ಯಾಗರ್ತಿ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಮಗ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಾಗರ ಗಂಗೋತ್ರಿ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ವಿ.ಎಸ್.ವಿನಯ್ ಹೇಳಿದರು.
ಸಮೀಪದ ಉಳ್ಳೂರು ಸಿಗಂದೂರೇಶ್ವರಿ ಕಾಲೇಜಿನ ಸಾಗರ ಗಂಗೋತ್ರಿ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದಿಂದ ಭಾರತದ ಹಾಕಿ ದಿಗ್ಗಜ ಮೇಜರ್ ಧ್ಯಾನ್‌ಚಂದ್ ಅವರ ಜನ್ಮ ದಿನದ ಪ್ರಯುಕ್ತ ಮಂಗಳವಾರ ಆಯೋಜಿಸಿದ್ದ ರಾಷ್ಟಿçÃಯ ಕ್ರೀಡಾ ದಿನಾಚರಣೆ ಹಾಗೂ ಫಿಟ್ ಇಂಡಿಯಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಸದೃಢತೆಯ ಮೇಲೆ ಪರಿಣಾಮ ಬೀರುತ್ತದೆ. ಉಜ್ವಲ ಭವಿಷ್ಯ ಹೊಂದಲು ಸಹಕಾರಿಯಾಗುತ್ತದೆ ಎದು ಅಭಿಪ್ರಾಯಪಟ್ಟರು.
ದೈಹಿಕ ನಿರ್ದೇಶಕ ಶ್ರೀಕಾಂತ್ ವಿದ್ಯಾರ್ಥಿಗಳಿಗೆ ಫಿಟ್ ಇಂಡಿಯಾ ಪ್ರತಿe್ಞÁ ವಿಽ ಬೋಽಸಿದರು. ಎನ್‌ಎಸ್‌ಎಸ್ ಕಾರ್ಯಕ್ರಮ ಅಽಕಾರಿ ಎಸ್.ವಿ.ಸತೀಶನಾಯ್ಕ್, ವಿದ್ಯಾರ್ಥಿ ಕಲ್ಯಾಣ ಕೋಶದ ಸಂಯೋಜಕ ಜಿ.ಎಸ್.ಚಿದಾನಂದ, ಉಪನ್ಯಾಸಕರಾದ ಎ.ಎಸ್.ಜ್ಯೋತಿ, ರೇವತಿ ಹೆಗಡೆ, ವಿನಾಯಕ ಹೆಗಡೆ, ಎಚ್.ಡಿ.ಗಜೇಂದ್ರಕುಮಾರ್ ಇದ್ದರು.