ಸಹೋದರತ್ವದ ಭಾವನೆ ಮೂಡಿಸಲು ಕ್ರೀಡೆ ಸಹಕಾರಿ

HUN-SEP-8-3(TALUK LEVEL SP0RTS)
ಹುಣಸೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಗಣ್ಯರು ಕ್ರೀಡಾಜ್ಯೋತಿ ಸ್ವೀಕರಿಸುವ ಮೂಲಕ ಉದ್ಘಾಟಿಸಿದರು. ಬಿಇಒ ಎಸ್.ಪಿ.ಮಹದೇವ, ಬಿಆರ್‌ಸಿ ಹೇಮಲತಾ, ಅಶೋಕ್‌ಕುಮಾರ್, ಶಶಿಕುಮಾರ್, ಮೋಹನ್‌ರಾಜ್ ಇತರರಿದ್ದರು.
Published on

ಹುಣಸೂರು : ಕ್ರೀಡೆ ವಿದ್ಯಾರ್ಥಿಗಳಲ್ಲಿ ಸಹೋದರತ್ವದ ಭಾವನೆ ಮೂಡಿಸಲು ಉತ್ತಮ ವೇದಿಕೆಯಾಗಿದೆ ಎಂದು ನಗರದ ಎಂಆರ್‌ಎನ್‌ವಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಅಶೋಕ್‌ಕುಮಾರ್ ಅಭಿಪ್ರಾಯಪಟ್ಟರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಎಂಆರ್‌ಎನ್‌ವಿ ವಿದ್ಯಾಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಕ್ರೀಡೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಕ್ರೀಡಾಕೂಟಗಳ ಮೂಲಕ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸುವ ಕಾರ್ಯ ನಡೆಯುತ್ತದೆ. ಸೋಲು ಗೆಲುವಿನ ಲೆಕ್ಕಾಚಾರ ಹಾಕದೇ ಕ್ರೀಡಾಸ್ಫೂರ್ತಿಯನ್ನು ಮರೆಯುವಂತಾಗಬೇಕು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ತಂಡ ಸ್ಪೂರ್ತಿ, ಸತತ ಪ್ರಯತ್ನಗಳು ವಿದ್ಯಾರ್ಥಿಗಳಲ್ಲಿ ಒಬ್ಬರಿಗೊಬ್ಬರಲ್ಲಿ ಸಹೋದರತ್ವವನ್ನು ಮೂಡಿಸಲಿದೆ. ಇಂತಹ ಕ್ರೀಡಾಕೂಟದ ಪ್ರಾಯೋಜಕತ್ವವನ್ನು ನಮ್ಮ ಸಂಸ್ಥೆ ಈ ಬಾರಿ ಹೊಂದಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ್, ದೈಹಿಕ ಶಿಕ್ಷಣ ಶಿಕ್ಷಕರು ಅತ್ಯಂತ ಶಿಸ್ತುಬದ್ಧವಾಗಿ ಕ್ರೀಡಾಕೂಟವನ್ನು ನಡೆಸಿಕೊಡಬೇಕು. ತೀರ್ಪುಗಾರರು ಯಾವುದೇ ತಾರತಮ್ಯವೆಸಗದೇ ತಮ್ಮ ತೀರ್ಪನ್ನು ಘೋಷಿಸಬೇಕು. ಗೊಂದಲ, ಅನುಮಾನಗಳಿಗೆ ಅವಕಾಶವಿಲ್ಲದಂತೆ ನಿಮ್ಮ ಕರ್ತವ ನಿರ್ವಹಿಸಿರಿ. ಕಳೆದ ಸಾಲಿನಲ್ಲಿ ತಾಲೂಕಿನ ಕ್ರೀಡಾಪಟುಗಳು ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿರುವ ದಾಖಲೆ ಇದ್ದು, ಈ ಬಾರಿಯೂ ಅದು ಪುನರಾವರ್ತನೆಯಾಗಲಿ ಎಂದು ಹಾರೈಸಿದರು.

ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಗಣ್ಯರಿಗೆೆ ಹಸ್ತಾಂತರಿಸಿದರು. ಗಣ್ಯರು ಪಾರಿವಾಳಗಳು ಮತ್ತು ಬಣ್ಣಬಣ್ಣದ ಬಲೂನುಗಳನ್ನು ಹಾರಿಬಿಟ್ಟು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಸಮಾರಂಭದಲ್ಲಿ ಎಂಆರ್‌ಎನ್‌ವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಚ್.ಸಿ.ಸುದೇಶ್, ಉಪಾಧ್ಕಕ್ಷ ಎಂ.ಎಸ್.ನಾಗರಾಜ್, ಮುಖ್ಯಶಿಕ್ಷಕ ಎಚ.ಡಿ.ಸೂರೇಗೌಡ, ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಪಿ.ಹೇಮಲತಾ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಬಿ.ಶಶಿಕುಮಾರ್, ಶಿಕ್ಷಣಾಧಿಕಾರಿಗಳ ತಾಲೂಕು ಅಧ್ಯಕ್ಷ ಮೋಹನ್‌ರಾಜ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ರಂಗಸ್ವಾಮಿ, ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕ ಎಸ್.ರಮೇಶ್, ಸೇರಿದಂತೆ ದೈಹಿಕ ಶಿಕ್ಷಣ ಶಿಕ್ಷಕರು, ಕ್ರೀಡಾಪಟುಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net