

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಸ್ಪರ್ಧಾ ಮನೋಭಾವ, ನಾಯಕತ್ವಗುಣ ಬೆಳೆಯುತ್ತದೆ. ಪಾಠದ ಜತೆಗೆ ಆಟಕ್ಕೂ ಪ್ರಾಧಾನ್ಯತೆ ನೀಡಬೇಕು ಎಂದು ಬಿಸಿಎನ್ ವಿದ್ಯಾಸಂಸ್ಥೆಯ ನಿರ್ದೇಶಕ ಲೋಹಿತ್ ನೆಲವಿಗಿ ಹೇಳಿದರು.
ಪಟ್ಟಣದ ಸವಣೂರ ರಸ್ತೆಯಲ್ಲಿರುವ ಬಿಸಿಎನ್(ಪಾಲಿಟೆಕ್ನಿಕ್) ಪ.ಪೂ.ಕಾಲೇಜಿನಲ್ಲಿ ಪ.ಪೂ.ಶಿಕ್ಷಣ ಇಲಾಖೆ, ಬಿಸಿಎನ್ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಪ.ಪೂ.ಕಾಲೇಜು ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
‘ಕ್ರೀಡೆಯು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸಹಾಯಮಾಡುತ್ತದೆ. ಇದು ದೈಹಿಕ ಬೆಳವಣಿಗೆಯ ಜತೆಗೆ ಅವರ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು.
ಸಂಸ್ಥೆಯ ನಿರ್ದೇಶಕ ನಾಗರಾಜ ಕುಲಕರ್ಣಿ ಮಾತನಾಡಿದರು. ಪ್ರಾಚಾರ್ಯ ಡಿ.ಎಸ್. ಪ್ಯಾಟಿ, ಪುರಸಭೆ ಅಧ್ಯಕ್ಷೆ ಜಯಕ್ಕ ಅಂದಲಗಿ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎಂ. ಹವಳದ, ವಿ.ಎಸ್. ವಿಜಯಕುಮಾರ, ಸುರೇಶ ಕೊಡ್ಲಿ, ಎಂ.ಕೆ. ಲಮಾಣಿ, ಐ.ಎಂ. ಸಿಂಗಟಾಲೂರ, ಎಂ.ಸಿ. ಹಿರೇಮಠ, ಡಾ.ಎನ್. ಹಯವದನ, ಕೃಷ್ಣ ಲಮಾಣಿ ಇತರರು ಇದ್ದರು.