ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿ

04M.D.R.4
ಮದ್ದೂರು ಪಟ್ಟಣದ ವರ್ಧಮಾನ್ ಇಂಟರ್ ನಾಷನಲ್ ಸ್ಕೂಲ್‌ನಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಿ.ಶ್ವೇತಾ, ಸರೋಜಮ್ಮ, ದೀಪಕ್, ಶ್ರೀಕಂಠಯ್ಯ ಇದ್ದರು.
Published on

ಮದ್ದೂರು: ಕ್ರೀಡೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬಹುದು. ಆದ್ದರಿಂದ ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕೆಂದು ಮುಖ್ಯಶಿಕ್ಷಕಿ ಸಿ.ಶ್ವೇತಾ ತಿಳಿಸಿದರು.

ಪಟ್ಟಣದ ವರ್ಧಮಾನ್ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಶನಿವಾರ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಯಲ್ಲಿ ಭಾಗವಹಿಸುವುರಿಂದ ವ್ಯಕ್ತಿತ್ವ ವಿಕಸಗೊಂಡು ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳು ಹಾಗೂ ಪಾಲಕರು ವೇಗದ ಓಟ ಸೇರಿದಂತೆ ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ ಸಂಭ್ರಮಪಟ್ಟರು. ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಶಾಲೆಯ ಅಧ್ಯಕ್ಷೆ ಸರೋಜಮ್ಮ, ಕಾರ್ಯದರ್ಶಿ ದೀಪಕ್, ದೈಹಿಕ ಶಿಕ್ಷಣ ಶಿಕ್ಷಕ ಶ್ರೀಕಂಠಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net