ಶಾರೀರಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ

RON
Published on

ರೋಣ: ವಿದ್ಯಾರ್ಥಿಗಳ ಮಾನಸಿಕ ಹಾಗೂ ಶಾರೀರಿಕ ಬೆಳವಣಿಗೆಯಲ್ಲಿ ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಪಾಟೀಲ ಹೇಳಿದರು.

ಪಟ್ಟಣದ ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರೋಣ, ಗಜೇಂದ್ರಗಡ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪ್ರತಿಯೊಂದು ಕ್ರೀಡೆಗಳಲ್ಲೂ ಭಾಗವಹಿಸಬೇಕು. ಇದಕ್ಕಾಗಿ ಕ್ರೀಡಾಂಗಣದಲ್ಲಿ ಸಕಲ ಸೌಲಭ್ಯ ಕಲ್ಪಿಸಲಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವ ಮಕ್ಕಳಿಗೆ ಕುಡಿಯಲು ನೀರು, ಊಟದ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡುವಂತೆ ಶಿಕ್ಷಕರಿಗೆ ಸೂಚಿಸಿದರು.

ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ತಹಸೀಲ್ದಾರ್ ನಾಗರಾಜ ಕೆ., ವಿದ್ಯಾರ್ಥಿಗಳು ಹೆಚ್ಚೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಬೇಕು. ತಾಲೂಕು ಮಟ್ಟದ ಕ್ರೀಡೆಗಳಲ್ಲಿ ವಿಜೇತರಾಗಿ ಜಿಲ್ಲಾಮಟ್ಟ, ರಾಜ್ಯಮಟ್ಟ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾಗಿ ರೋಣ ಕ್ಷೇತ್ರದ ಕೀರ್ತಿ ಹೆಚ್ಚಿಸಿ ಎಂದು ಶುಭ ಹಾರೈಸಿದರು.

ಬಿಇಒ ಅರ್ಜುನ್ ಕಂಬೋಗಿ, ಪ್ರಾಥಮಿಕ ಶಾಲೆ ನೌಕರರ ಸಂಘದ ಅಧ್ಯಕ್ಷ ವೈ.ಡಿ. ಗಾಣಿಗೇರ, ಎಸ್.ಜಿ. ದಾನಪ್ಪಗೌಡ್ರ, ಮಹೇಶ ಕುರಿ, ಆರ್.ಎಸ್. ನರೇಗಲ್ಲ, ಪಿ.ಬಿ. ಗೌಡರ, ಆರ್.ಎಸ್. ಇಟಗಿ, ಯಲ್ಲಪ್ಪ ಕಿರೇಸೂರ, ಎಸ್.ಕೆ. ಮಠದ, ವಿ.ಸಿ. ಮ್ಯಾಗೇರಿ, ಪಿ.ಎಫ್. ಗೌಡರ, ಕಲ್ಲನಗೌಡ ನಾಯ್ಕರ್, ಬಸವರಾಜ ಹೊಸಳ್ಳಿ, ಅಸ್ಲಾಂ ಕೊಪ್ಪಳ, ಮಲ್ಲಯ್ಯ ಸ್ಥಾವರಮಠ, ಜಗದೀಶ ಅಳ್ಳೊಳ್ಳಿ, ಬಸವರಾಜ ಕಾಳೆ, ರಾಚಪ್ಪ ಗೆದಗೇರಿ, ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net