ಗೋಣಿಕೊಪ್ಪ: ಸರ್ವದೈವತ ವಿದ್ಯಾಸಂಸ್ಥೆಯ ವತಿಯಿಂದ ಪ್ರೌಢಶಾಲಾ ಮಕ್ಕಳಿಗೆ ಕೆಸರುಗದ್ದೆ ಕ್ರೀಡಾಕೂಟವನ್ನು ಸಂಸ್ಥೆಯ ಅಧ್ಯಕ್ಷ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ ಗದ್ದೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.
ಕ್ರೀಡಾಕೂಟಕ್ಕೆ ವಿದ್ಯಾಸಂಸ್ಥೆಯ ಅಧ್ಯಕ್ಷ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕ್ರೀಡೆ ದೈಹಿಕ ಹಾಗೂ ಮಾನಸಿಕ ಸ್ಥಿಮಿತ ಸಾಧಿಸಲು ಸಹಕಾರಿ. ಆ ನಿಟ್ಟಿನಲ್ಲಿ ಮಕ್ಕಳಿಗೆ ಕೆಸರುಗದ್ದೆ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ವಾಲಿಬಾಲ್, ಥ್ರೋಬಾಲ್, ಹಗ್ಗಜಗ್ಗಾಟ ಮತ್ತು ಓಟದ ಸ್ಪರ್ಧೆಗಳನ್ನು ಏರ್ಪಡಿಸುವುದರ ಮೂಲಕ ರಂಜಿಸಲಾಯಿತು.
ಡಾಕೂಟದಲ್ಲಿ ಹಿರಿಯ ಪ್ರಾಂಶುಪಾಲರಾದ ಲಲಿತಾ ಮೊಣ್ಣಪ್ಪ, ಪ್ರಾಂಶುಪಾಲರಾದ ಪ್ರದೀಪ್ ಪಿ .ಆರ್., ಶಿಕ್ಷಕರು ಹಾಜರಿದ್ದರು. ಕ್ರೀಡಾಕೂಟವು ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ವಿ.ಎನ್. ಮುಂದಾಳತ್ವದಲ್ಲಿ ಯಶಸ್ವಿಯಾಗಿ ನೆರವೇರಿತು.