

ಲಕ್ಷ್ಮೇಶ್ವರ: ಕ್ರೀಡೆಯು ಸ್ನೇಹ, ಹೊಂದಾಣಿಕೆ ಮತ್ತು ನಾಯಕತ್ವದ ಗುಣ ಬೆಳೆಯುವಲ್ಲಿ ನೆರವಾಗುತ್ತದೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಎಂ ಹವಳದ ಹೇಳಿದರು.
ಪಟ್ಟಣದ ಎಂಜಿಎಂ ಯುನಿವರ್ಸಲ್ ಶಾಲೆಯಲ್ಲಿ ಗ್ರೂಪ್ ನಂ.೨ರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ದೈಹಿಕ, ಮಾನಸಿಕ, ಬೌದ್ಧಿಕ ಬೆಳವಣಿಗೆಗೆ ಕ್ರೀಡೆಗಳು ಪೂರಕ. ವಿದ್ಯಾರ್ಥಿಗಳು ಪ್ರಾಥಮಿಕ ಶಾಲಾ ಹಂತದಲ್ಲಿಯೇ ಕ್ರೀಡಾ ಮನೋಭಾವ ಹೊಂದಿರಬೇಕು ಎಂದರು.
ಸಂಸ್ಥೆಯ ಕಾರ್ಯದರ್ಶಿ ಬಸವೇಶ ಮಹಾಂತಶೆಟ್ಟರ ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಮಾತನಾಡಿ, ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಕ್ರೀಡೆಯಲ್ಲಿ ಗೆಲ್ಲಲು ಉತ್ತಮ ತರಬೇತಿ ಅಗತ್ಯ ಎಂದರು. ಬಿಆರ್‌ಪಿ ಈಶ್ವರ ಮೆಡ್ಲೇರಿ ಮಾತನಾಡಿದರು. ಶಿವಾನಂದ ಅಸುಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಸ್ಥೆಯ ರಮೇಶ ನವಲೆ, ಎಸ್.ಎಫ್. ಕೊಡ್ಲಿ, ಸ.ಪ್ರಾ.ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಹರ್ಲಾಪುರ, ಕಾರ್ಯದರ್ಶಿ ಚಂದ್ರು ನೇಕಾರ, ಉಪಾಧ್ಯಕ್ಷ ಡಿ.ಡಿ. ಲಮಾಣಿ, ಸಿಆರ್‌ಪಿಗಳಾದ ಉಮೇಶ ನೇಕಾರ, ಎನ್.ಎ. ಮುಲ್ಲಾ, ಸತೀಶ ಬೋಮಲೆ, ಎಂ.ಎಸ್. ಕಾಳೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ. ದ್ಯಾವನಗೌಡ್ರ, ಎಂ.ಐ. ಕಣಕೆ, ಗುತ್ತಲ, ಮುಖ್ಯ ಶಿಕ್ಷಕಿ ಕವಿತಾ ಮೆಣಸಗಿ, ವಿವಿಧ ಶಾಲೆಗಳ ಕ್ರೀಡಾಪಟುಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.