ಸದೃಢ ದೇಹ ಹೊಂದಲು ಕ್ರೀಡೆ ಸಹಕಾರಿ

29 ckm 3
ಚಿಕ್ಕಮಗಳೂರು ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಗುರುವಾರ ಜಿಪಂ, ತಾಪಂ, ಶಾಲಾ ಶಿಕ್ಷಣ ಇಲಾಖೆ, ಮಳಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅಂಬಳೆ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ರವೀಶ್, ಉಮೇಶ್, ಕೃಷ್ಣರಾಜ ಅರಸ್, ಸುಂದರೇಶ್, ಶಿವಪ್ಪ, ಶ್ರೀನಿವಾಸ್, ಕಿರಣ್ ಕುಮಾರ್, ಸುರೇಶ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಒಳ್ಳೆಯ ಆರೋಗ್ಯ ಮತ್ತು ಸದೃಢ ದೇಹ ಹೊಂದಲು ಕ್ರೀಡೆಗಳು ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್ ತಿಳಿಸಿದರು.

ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಗುರುವಾರ ಜಿಪಂ, ತಾಪಂ, ಶಾಲಾ ಶಿಕ್ಷಣ ಇಲಾಖೆ, ಮಳಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅಂಬಳೆ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ-೨೦೨೪-೨೫ನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಜಯಗಳಿಸಿ, ಶಾಲೆಗೆ, ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು. ಶಿಕ್ಷಕರು ಕ್ರೀಡಾಕೂಟದಲ್ಲಿ ಭಾಗವಹಿಸಿ ಮಕ್ಕಳಿಗೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ನಗರದ ಆಶಾ ಕಿರಣ ಅಂಧಮಕ್ಕಳ ಪಾಠಶಾಲೆಯ ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ವಿಕಲಾಂಗ ಚೇತನರು ಕ್ರೀಡೆಯಲ್ಲಿ ಭಾಗವಹಿಸಬಹುದು ಎಂಬುದನ್ನು ತೋರಿಸಿದ್ದಾರೆ. ಈ ಮಕ್ಕಳ ಕ್ರೀಡಾ ಸ್ಫೂರ್ತಿ ಇತರರಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.
ಧ್ವಜಾರೋಹಣ ನೆರವೇರಿಸಿದ ಮಳಲೂರು ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಉಮೇಶ್ ಮಾತನಾಡಿ, ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯ. ಸದೃಢ ಹಾಗೂ ಆರೋಗ್ಯವಂತ ವ್ಯಕ್ತಿಯಾಗಬೇಕಾದರೆ ಕ್ರೀಡೆಯಲ್ಲಿ ಭಾಗವಹಿಸಲೇ ಬೇಕು ಎಂದು ಹೇಳಿದರು.
ಕ್ರೀಡಾಕೂಟಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸ್ಫರ್ಧೆಯಲ್ಲಿ ಭಾಗವಹಿಸುವುದು ಅಗತ್ಯ. ಗೆದ್ದವರು ಹಿಗ್ಗದೆ, ಸೋತವರು ಕುಗ್ಗದೆ ಕ್ರೀಡಾ ಮನೋಭಾವದಿಂದ ಪ್ರತಿಯೊಬ್ಬರೂ ಕ್ರೀಡಾಕೂಟದಲ್ಲಿ ಭಾಗವಹಿಸುವಂತಾಗಬೇಕು ಎಂದು ಕರೆನೀಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಕೃಷ್ಣರಾಜ ಅರಸ್, ಸುಂದರೇಶ್, ಶಿವಪ್ಪ, ಶ್ರೀನಿವಾಸ್, ಕಿರಣ್ ಕುಮಾರ್, ಸುರೇಶ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಜಗದೀಶ್, ಉಪಾಧ್ಯಕ್ಷೆ ವಿಲ್ಮಾ, ಸುಮತ್ರ, ಚಂದ್ರಕಾAತ್, ಶಿವಕುಮಾರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net