

ಹೊನ್ನಾವರ: ‘ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಉತ್ಸಾಹ ಹೆಚ್ಚಲು ಕ್ರೀಡೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಾಧನೆ ಮಾಡಬೇಕು’ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.
ಪಟ್ಟಣದ ಎಸ್.ಡಿ.ಎಂ. ಕಾಲೇಜು ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕು ಪ್ರಾಢಶಾಲೆಗಳ ಇಲಾಖೆ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತಮಾಡಿದರು. ‘ಆರೋಗ್ಯ, ಶಿಕ್ಷಣ ಮತ್ತು ಕುಡಿಯುವ ನೀರು ಇವು ಮನುಷ್ಯನಿಗೆ ಅತ್ಯಂತ ಅಗತ್ಯವಾಗಿದೆ. ಇವುಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇನೆ. ಹೊನ್ನಾವರದಲ್ಲಿ ಉತ್ತಮ ಕ್ರೀಡಾಂಗಣದ ಅಗತ್ಯವಿದೆ. ಕ್ರೀಡೆಗೂ ಕೂಡ ಉತ್ತೇಜನ ನೀಡಲಾಗುವುದು’ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಪಂ ಸದಸ್ಯೆ ಮೇಧಾ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ತಾಪಂ ಇಒ ಸುರೇಶ ನಾಯ್ಕ, ಬಿಆರ್ಸಿ ಸಮನ್ವಯಾಧಿಕಾರಿ ಎಸ್.ಎಂ. ಹೆಗಡೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಟಿ. ನಾಯ್ಕ, ಪ್ರೌಢಶಾಲೆ ಶಿಕ್ಷಕರ ಸಂಘದ ಅದ್ಯಕ್ಷ ಸತೀಶ ನಾಯ್ಕ, ಎಲ್.ಎಂ. ಹೆಗಡೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ. ನಾಯ್ಕ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣ ಗೌಡ, ಮಹೇಶ ಶೆಟ್ಟಿ, ಸಂತೋಷ ನಾಯ್ಕ, ಸಾಧನಾ ಬರ್ಗಿ, ಇತರರಿದ್ದರು. ಶಿಕ್ಷಕರಾದ ಆರ್.ಬಿ. ಶೆಟ್ಟಿ ಮತ್ತು ಕೆ.ಎಂ. ಖರ್ವಾ ಕಾರ್ಯಕ್ರಮ ನಿರ್ವಹಿಸಿದರು.