

ಯಲ್ಲಾಪುರ: ದೈಹಿಕ ಶಕ್ತಿ, ಸಾಮರ್ಥ್ಯ ಹೆಚ್ಚಿಸಲು ಕ್ರೀಡೆ ಸಹಕಾರಿ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ಜಿಪಂ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವ ಒಕ್ಕೂಟ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಪಪಂ ಅಧ್ಯಕ್ಷೆ ನರ್ಮದಾ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಯುವಜನ ಸೇವಾ ಕ್ರೀಡಾಧಿಕಾರಿ ನಾರಾಯಣ ನಾಯಕ ಅವರನ್ನು ಗೌರವಿಸಲಾಯಿತು.
ಪಪಂ ಉಪಾಧ್ಯಕ್ಷ ಅಮಿತ ಅಂಗಡಿ, ತಹಸೀಲ್ದಾರ್ ಯಲ್ಲಪ್ಪ ಗೊನೆಣ್ಣನವರ್, ಬಿಇಒ ಎನ್.ಆರ್. ಹೆಗಡೆ, ತಾಪಂ ಇಒ ರಾಜೇಶ ಧನವಾಡಕರ್, ಪ್ರಮುಖರಾದ ಡಾ. ರವಿ ಭಟ್ಟ ಬರಗದ್ದೆ, ಸಣ್ಣಪ್ಪ ಭಾಗ್ವತ, ಸದಾನಂದ ನಾಯ್ಕ, ಪ್ರಶಾಂತ ಜಿ.ಎನ್., ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ಪ್ರಶಾಂತ ಸಭಾಹಿತ, ಪ್ರಧಾನ ಕಾರ್ಯದರ್ಶಿ ಶ್ರೀಧರ ಅಣಲಗಾರ ಇತರರಿದ್ದರು. ಶಿಕ್ಷಕ ಶ್ರೀಧರ ಹೆಗಡೆ ನಿರ್ವಹಿಸಿದರು.