ಹುಬ್ಬಳ್ಳಿ: ಇಲ್ಲಿಯ ಉಣಕಲ್ಲ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಸಿರಿಗೆರೆಯ ಐ.ಜಿ. ಹಿರೇಗೌಡರ ಪದವಿ ಪೂರ್ವ ಕಾಲೇಜು, ಆರ್.ಕೆ. ಕೊಕಾಟೆ ಪ್ರೌಢಶಾಲೆ ಹಾಗೂ ತರಳಬಾಳು ಕಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಡಿ. 21ರಂದು ಬೆಳಗ್ಗೆ 8.30ಕ್ಕೆ ಏರ್ಪಡಿಸಲಾಗಿದೆ.
ಪಾಲಿಕೆ ಸದಸ್ಯ ಶಿವಕುಮಾರಗೌಡ ರಾಯನಗೌಡರ ಕಾರ್ಯಕ್ರಮ ಉದ್ಘಾಟಿಸುವರು. ಆರ್.ವಿ. ಪಾಟೀಲ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ವೆಂಕಣ್ಣ ಕರಡ್ಡಿ, ತರಳಬಾಳು ಕ್ಯಾಂಪಸ್ ಸ್ಥಳಿಯ ಸಲಹಾ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸುವರು.