

ಚಿಕ್ಕಮಗಳೂರು: ಆರೋಗ್ಯ ನಿರ್ವಹಣೆಗೆ ಕ್ರೀಡೆ ಅಮೂಲ್ಯ ಸಾಧನ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದ್ದು, ಕ್ರೀಡಾಸಕ್ತಿ ಇರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಕರೆ ನೀಡಿದರು.
ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸಹಯೋಗದಲ್ಲಿ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಸ್ಮರಣಾರ್ಥ ಆಯೋಜಿಸಲಾಗಿದ್ದ ರಾಷ್ಟಿçÃಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಆರೋಗ್ಯವಾಗಿದ್ದರೆ ಮಾತ್ರ ಕಲಿಕೆಯಲ್ಲಿ ಸಾಧನೆ ಮಾಡಲು ಸಾಧ್ಯ. ಸದೃಢ ದೇಹದಲ್ಲಿ ಸದೃಢ ಮನಸ್ಸಿರುತ್ತದೆ ಎಂಬ ಮಾತಿನಂತೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ಮುಖ್ಯ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವವಿದೆ ಎಂದು ಅಭಿಪ್ರಾಯಪಟ್ಟರು.
ಆ. ೨೯ರಂದು ದೇಶಾದ್ಯಂತ ರಾಷ್ಟಿçÃಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ರಾಷ್ಟç ಕಂಡ ಸರ್ವಶ್ರೇಷ್ಠ ಕ್ರೀಡಾ ಪಟುಗಳಲ್ಲಿ ಒಬ್ಬರಾದ ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಅವರ ಹುಟ್ಟಿದ ದಿನವನ್ನು ರಾಷ್ಟಿçÃಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ಮೂಲಕ ದಿಗ್ಗಜ ಕ್ರೀಡಾಪಟುವಿನ ನೆನಪಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಮತ್ತಷ್ಟು ಉತ್ತೇಜನ ನೀಡಲಾಗುತ್ತಿದೆ ಎಂದರು.
ಎಎಸ್‌ಪಿ ಕೃಷ್ಣ ಮೂರ್ತಿ ಮಾತನಾಡಿ ರಾಷ್ಟಿçÃಯ ಕ್ರೀಡಾ ದಿನಾಚರಣೆಯ ಮುಖ್ಯ ಉz್ದೆÃಶ ಕ್ರೀಡೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿಯನ್ನುಂಟು ಮಾಡುವುದು. ಜೊತೆಗೆ ದೈನಂದಿನ ಜೀವನದಲ್ಲಿ ದೈಹಿಕವಾಗಿ ಸಕ್ರೀಯವಾಗಿರುವಂತೆ ಪ್ರೇರೇಪಿಸುವುದಾಗಿದೆ. ಇಂದು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳ ಬದಲು ಮೊಬೈಲ್ ಬಳಕೆಯಲ್ಲಿ ಹೆಚ್ಚು ತಲ್ಲೀನರಾಗಿರುತ್ತಾರೆ. ಇದರಿಂದ ಮಾನಸಿಕ ಖಿನ್ನತೆ ದೈಹಿಕ ದೌರ್ಬಲ್ಯಗೊಂಡು ತಮ್ಮ ಆರೋಗ್ಯ ಹದಗೆಡಿಸಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡೆ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ಸಾಹದಿಂದಿರಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಸಹಾಯಕ ನಿರ್ದೇಶಕ ಡಾ. ರಮೇಶ್, ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಶ್ಯಾಮ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.