ಕುಂದಾಪುರದಲ್ಲಿ ಕ್ರೀಡಾಕೂಟ ಆಯೋಜನೆ

gan (7)
Published on

ಕುಂದಾಪುರ: ಡಿ.ದೇವರಾಜ್ ಅರಸು ಜನ್ಮ ದಿನಾಚರಣೆ ಹಿನ್ನೆಲೆ ಕುಂದಾಪುರ ತಾಲೂಕಿನ ವಸತಿ ನಿಲಯಗಳ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಕುಂದಾಪುರ ಮೂಲದಲ್ಲಿ ಭಾನುವಾರ ಕ್ರೀಡಾಕೂಟ ಆಯೋಜಿಸಲಾಯಿತು.

ಕುಂದಾಪುರ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ್.ವಿ ಉದ್ಘಾಟಿಸಿದರು. ಕುಂದಾಪುರ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆಶಾದೇವಿ ನಾಯಕ ಅಧ್ಯಕ್ಷತೆ ವಹಿಸಿದ್ದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇವಾನಂದ, ಕುಂದಾಪುರ ಠಾಣೆ ಉಪನಿರೀಕ್ಷಕ ನಂಜಾ ನಾಯ್ಕ ಶುಭ ಹಾರೈಸಿದರು.

ತೀರ್ಪುಗಾರರಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಿಕ್ಷಕಿ ಸರಸ್ವತಿ, ವಡ್ಡರ್ಸೆ ನಾರಾಯಣಗುರು ವಸತಿ ಶಾಲೆ ಶಿಕ್ಷಕಿ ಸುಧಾ, ಕುಂದಾಪುರ ಬಿ.ಬಿ.ಹೆಗ್ಡೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಿರ್ಮಲ, ಸಿಬ್ಬಂದಿ ರವೀಂದ್ರ ಉಪಸ್ಥಿತರಿದ್ದರು. ನಿಲಯ ಪಾಲಕಿ ಆಶಾ ಲತಾ ಸ್ವಾಗತಿಸಿದರು. ವಿದ್ಯಾರ್ಥಿನಿ ಸ್ವಾತಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net