ಕ್ರೀಡೆಯಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯ

07raju1
Published on

ಚಾಮರಾಜನಗರ: ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಪಠ್ಯೇತರ ಚಡುವಟಿಕೆಗಳಲ್ಲಿ ಭಾಗವಹಿಸಿ ಎಂದು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ಹರವೆ ಸಲಹೆ ನೀಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ 2023-24ನೇ ಸಾಲಿನ ಚಾಮರಾಜನಗರ ತಾಲೂಕು ಪಟ್ಟಣ ವಲಯಮಟ್ಟದ ಪ್ರೌಢಶಾಲೆ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಗಳು ಪಠ್ಯದ ಜತೆಗೆ, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಈ ಮೂಲಕ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಯಾವ ವಿದ್ಯಾರ್ಥಿಗಳು ಕ್ರೇಡೆಯಲ್ಲಿ ಸಾಮರ್ಥ್ಯ ಹೊಂದಿರುತ್ತಾನೋ, ಆತ ಮಾನಸಿಕವಾಗಿ ಸದೃಢವಾಗಿರುತ್ತಾನೆ. ಹೆಚ್ಚಾಗಿ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ನಮ್ಮ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬಹುದು. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವುದೇ ಬಹುಮುಖ್ಯವಾಗುತ್ತದೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಮುನ್ನಡೆಯೋಣ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಹೆಚ್ಚಾಗಿ ಕ್ರೀಡೆಯಲ್ಲಿ ಭಾಗವಹಿಸುವುದು ಕಲಿಕೆಗೂ ಹೆಚ್ಚು ಸಹಕಾರಿಯಾಗಲಿದೆ. ಈ ಹಂತದಲ್ಲೇ ತಮ್ಮ ಮುಂದಿನ ಗುರಿಯನ್ನು ನಿರ್ಧರಿಸಿಕೊಳ್ಳಿ ಆಗ ಮಾತ್ರ ನೀವು, ಉನ್ನತ ಹಂತದ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಕದರೀಡೆಯಲ್ಲಿ ಯಾವುದೇ ರೀತಿಯ ದ್ವೇಷವನ್ನು ಇಟ್ಟುಕೊಳ್ಳದೇ ಎಲ್ಲರೂ ಒಂದೇ ಎಂಬ ಭಾವನೆಯಿಂದ ಸಾಗಬೇಕು ಎಂದು ಕಿವಿಮಾತು ಹೇಳಿದರು.

ಈ ವೇಳೆ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಾದಪ್ಪ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಕಾರ್ಯದರ್ಶಿ ಎಂ.ಕಿರಣ್‌ರಾಜ್, ದೈಹಿಕ ಶಿಕ್ಷಣ ಪರಿವೀಕ್ಷಕ ಮೋಹನ್‌ಕುಮಾರ್, ಮಹದೇವಸ್ವಾಮಿ, ನಾಗಣ್ಣ, ಜೋಸ್ೆ, ಚಿಕ್ಕಬಸವಯ್ಯ, ತಗಡೂರಯ್ಯ, ಮಾದೇಗೌಡ, ನಂಜುಂಡಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕ ಡಾ.ನಂಜರಾಜು ಹೊಂಗನೂರು, ನಟರಾಜು ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net