ಜೆಎಸ್‌ಎಸ್ ಶಾಲೆ ವಿದ್ಯಾರ್ಥಿಗಳ ಕ್ರೀಡಾ ಸಾಧನೆ

19 Dwd 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಜೆಎಸ್‌ಎಸ್ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.
ಬಾಲಕ ಮತ್ತು ಬಾಲಕಿಯರ ಹ್ಯಾಂಡ್‌ಬಾಲ್ ಸ್ಪರ್ಧೆಯಲ್ಲಿ ಇಲ್ಲಿನ ಮೃತ್ಯುಂಜಯನಗರದ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ತೇಜಸ್ ಸವದಿ, ಮುರುಗೇಶ ಕರಡಕಲ್ ಹಾಗೂ ಪ್ರತೀಕ ಹೆಬ್ಬಳ್ಳಿ, ವಿದ್ಯಾರ್ಥಿನಿಯರಾದ ಕೀರ್ತನಾ ಸವದಿ, ಶ್ರೇಯಾ ಕಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಮೃತಾ ಪಾಟೀಲ ವಿಭಾಗ ಮಟ್ಟದ ಕ್ರಿಕೆಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಅಶೋಕ ಹೆಬ್ಬಳ್ಳಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಅನನ್ಯ ಮೆಣಸಿನಕಾಯಿ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿಗಳನ್ನು ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಅಭಿನಂದಿಸಿದರು. ಐಟಿಐ ಕಾಲೇಜ್ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಶಾಲೆಯ ಪ್ರಾಚಾರ್ಯೆ ತ್ರಿವೇಣಿ ಆರ್. ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net