ಜೆಎಸ್‌ಎಸ್ ವಿದ್ಯಾರ್ಥಿಗಳ ಕ್ರೀಡಾ ಸಾಧನೆ

30 Dwd 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಿಯಾ ರಾಯಚೂರ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅನುಷಾ ಕುಂಬಾರ ಜಿಮ್ನಾಸ್ಟಿಕ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಹರ ಕ್ಲಸ್ಟರ್ ಮಟ್ಟದ 2024- 25ನೇ ಸಾಲಿನ ಕ್ರೀಡಾಕೂಟದಲ್ಲಿ ಪ್ರಣಮ್ಯಾ ಹಡಗಲಿ ಹರ್ಡಲ್ಸ್, ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಮತ್ತು 600 ಮೀ. ಓಟ, 400 ಮೀ. ಓಟದಲ್ಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆೆ. ಪ್ರವೀಣ ಹೊಸಮನಿ 45 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ದ್ವಿತೀಯ ಸ್ಥಾನ, ಪ್ರೀತಮ್ ಗೌಡ 48 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ.
ವಿದ್ಯಾರ್ಥಿಗಳನ್ನು ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಅಭಿನಂದಿಸಿದರು. ಜೆಎಸ್‌ಎಸ್ ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಶಾಲಾ ಪ್ರಾಚಾರ್ಯೆ ಮೈನಾವತಿ ದಿವಟೆ, ವೃಷಭ ಕುರುಕುರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net