ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಬಲ

20201212105117_IMG_5983
Published on

ಶಿವಮೊಗ್ಗ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುತ್ತವೆ ಎಂದು ಎಂಎಲ್​ಸಿ ಆರ್. ಪ್ರಸನ್ನಕುಮಾರ್ ಹೇಳಿದರು.

ಪೆಸಿಟ್ ಕಾಲೇಜು ಕ್ರೀಡಾಂಗಣದಲ್ಲಿ ಶನಿವಾರ ಮಹಾನಗರ ಪಾಲಿಕೆ ನೌಕರರ ಸಂಘದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ನಿರಂತರ ಒತ್ತಡದಲ್ಲಿ ಕೆಲಸ ಮಾಡುವ ಪಾಲಿಕೆ ಸಿಬ್ಬಂದಿ ಇಂತಹ ಅವಕಾಶಗಳನ್ನು ಬಳಸಿಕೊಳ್ಳಬೇಕು.ಕುಟುಂಬಸ್ಥರೊಂದಿಗೆ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಮನರಂಜನೆ ಜತೆಗೆ ಮನೆಯ ವಾತಾವರಣವೂ ಚೆನ್ನಾಗಿರುತ್ತದೆ. ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ಮನಸ್ಸು ಉಲ್ಲಾಸವಾಗಿರುತ್ತದೆ. ಸಿಬ್ಬಂದಿ ಆರೋಗ್ಯ ಚೆನ್ನಾಗಿದ್ದರೆ ಪಾಲಿಕೆ ಆರೋಗ್ಯವೂ ಚೆನ್ನಾಗಿರುತ್ತದೆ. ಕ್ರೀಡಾಕೂಟದಲ್ಲಿ ಭಾಗವಹಿಸುವುದು ಅತಿ ಮುಖ್ಯ ಎಂದು ಹೇಳಿದರು.

ಮೇಯರ್ ಸುವರ್ಣಾ ಶಂಕರ್ ಮಾತನಾಡಿ, ಎರಡು ದಿನಗಳ ಕ್ರೀಡಾಕೂಟದಲ್ಲಿ ಪಾಲಿಕೆ ಸದಸ್ಯರೂ ಸೇರಿ 12 ತಂಡಗಳು ಕ್ರಿಕೆಟ್ ಆಡಲಿವೆ ಎಂದರು. ಪ್ರತಿಪಕ್ಷ ನಾಯಕ ಎಚ್.ಸಿ.ಯೋಗೀಶ್, ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ, ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಮಾರಪ್ಪ, ಕಾರ್ಯದರ್ಶಿ ಎನ್. ಗೋವಿಂದ, ಪಾಲಿಕೆ ಸದಸ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net