ಮಕ್ಕಳಲ್ಲಿ ಕ್ರೀಡಾ ಮನೋಭಾವನೆ ಬೆಳೆಸಿ

dj nyk sports
Published on

ನಾಯಕನಹಟ್ಟಿ: ಚಿಕ್ಕವಯಸ್ಸಿನಲ್ಲೇ ವಿದ್ಯಾರ್ಥಿಗಳಲ್ಲಿ ಕ್ರೀಡಾ ಹಾಗೂ ಸ್ಪರ್ಧಾತ್ಮಕ ಮನೋಭಾವನೆಯನ್ನು ಜಾಗೃತಗೊಳಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಹೇಳಿದರು.

ಮುಸ್ಟಲಗುಮ್ಮಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಉತ್ತರ ವಲಯ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಬೇಕಿದೆ.

ವಿದ್ಯಾರ್ಥಿಗಳು ದೈಹಿಕ ಶಿಕ್ಷಣ ಶಿಕ್ಷಕರ ಸಲಹೆಗಳನ್ನು ಪಾಲಿಸಿದರೆ ಸಾಧನೆ ಸುಲಭ ಆಗಲಿದೆ ಎಂದರು.

ಕ್ರೀಡೆಯಿಂದ ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢವಾಗುತ್ತದೆ ಎನ್ನುವುದನ್ನು ಮಕ್ಕಳು ಮತ್ತು ಪಾಲಕರಿಗೆ ಶಿಕ್ಷಕರು ಮನವರಿಕೆ ಮಾಡಿಕೊಡಬೇಕು.

ಈ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ಶಂಕರಸ್ವಾಮಿ, ಎ.ಪಿ.ರೇವಣ್ಣ, ನಾಗೇಶ, ಸಣ್ಣೋಬಯ್ಯ, ಪಾಲಯ್ಯ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಡಿ.ಬಿ.ನಿಂಗಪ್ಪ, ಶಿಕ್ಷಣ ಸಂಯೋಜಕ ವಿ.ಈರಸ್ವಾಮಿ, ಗಿರೀಶ್, ರವಿಶಂಕರ್, ಆರ್.ಸದಾಶಿವಯ್ಯ, ಜಿ.ಟಿ.ಶಾಂತಕುಮಾರಿ, ಪಾಪಣ್ಣ, ಪಿ.ಎಂ.ವಿಶ್ವನಾಥ್, ಎನ್.ಮಹಾಂತೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net