

ಮಂಗಳೂರು: ರಾಷ್ಟ್ರೀಯ ವಿಚಾರಧಾರೆಯೊಂದಿಗೆ ಕ್ರೀಡಾ ಕ್ಷೇತ್ರವನ್ನು ಮುನ್ನಡೆಸುವ ಶಕ್ತಿ ಕ್ರೀಡಾಭಾರತಿಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಮಂಗಳೂರು ಸಂಘ ಚಾಲಕ ಡಾ. ಸತೀಶ್ ರಾವ್ ಅಭಿಪ್ರಾಯಪಟ್ಟರು.
ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಭಾನುವಾರ ಕ್ರೀಡಾ ಭಾರತಿ ಮಂಗಳೂರು ಮತ್ತು ಶಕ್ತಿ ವಿದ್ಯಾ ಸಂಸ್ಥೆ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ತ ಕ್ರೀಡಾ ಭಾರತಿ ಧ್ಯಾನ್‌ಚಂದ್ ಪ್ರಶಸ್ತಿ ಮತ್ತು ಜೀಜಾ ಮಾತೆ ಪ್ರಶಸ್ತಿ ಪ್ರದಾನ ಹಾಗೂ ಪುರುಷರ ಮತ್ತು ಮಹಿಳೆಯರ ಜಿಲ್ಲಾಮಟ್ಟದ ವಾಲಿಬಾಲ್, ಥ್ರೋಬಾಲ್ ಪಂದ್ಯಾಟ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಂಸದರು ಕ್ರೀಡಾ ದಿನಾಚರಣೆ ಉದ್ಘಾಟಿಸಿದರು. ಕ್ರೀಡಾ ಭಾರತಿಯ ಧ್ಯಾನ್‌ಚಂದ್ ಪ್ರಶಸ್ತಿಯನ್ನು ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸದಾನಂದ ಶೆಟ್ಟಿ ಅವರಿಗೆ ಮೇಯರ್ ಜಯಾನಂದ ಅಂಚನ್ ಪ್ರದಾನಗೈದರು.ಜೀಜಾಮಾತೆ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಪವರ್ ಲಿಫ್ಟರ್ ಸ್ಪೆಷಲ್ ಒಲಂಪಿಕ್ಸ್ ಮಾಸ್ಟರ್ ಹರೀಶ್ ವೆಂಕಟೇಶ್‌ಗೆ ನೀಡಲಾಯಿತು.
ಕ್ರೀಡಾ ಭಾರತಿ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ನಾಗರಾಜ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ವೇದವ್ಯಾಸ್ ಕಾಮತ್ ಇದ್ದರು. ಶಕ್ತಿ ವಿದ್ಯಾ ಸಂಸ್ಥೆ ಸಂಸ್ಥಾಪಕ ಡಾ.ಕೆ.ಸಿ. ನಾಕ್‌ಅವರನ್ನು ಗೌರವಿಸಲಾಯಿತು.
ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಭೋಜರಾಜ್ ಕಲ್ಲಡ್ಕ, ಜಿಲ್ಲಾ ಅಧ್ಯಕ್ಷರಾದ ಕಾರಿಯಪ್ಪ ರೈ , ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್ ಕೆ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ಕೃಷ್ಣ ಶೆಟ್ಟಿ ತಾರೆಮಾರ್ ಸ್ವಾಗತಿಸಿದರು. ಪ್ರೇಮನಾಥ್ ಉಳ್ಳಾಲ್ ವಂದಿಸಿದರು. ನಾರಾಯಣ್ ಎಸ್. ನಿರೂಪಿಸಿದರು.