

ಹಿರಿಯೂರು: ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ-ಕ್ರೀಡಾ ಮನೋಭಾವ ಬೆಳೆಸುತ್ತದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಧರ್ಮಪುರ ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ಶಾಲಾ ಹಂತದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಶಿಕ್ಷಣದ ಜತೆ ಮಾನವೀಯ ಗುಣ, ನೈತಿಕ ಮೌಲ್ಯ, ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು. ಸ್ಪಷ್ಟ ಗುರಿ, ಬದ್ಧತೆಯಿಂದ ಭವಿಷ್ಯ ಕಟ್ಟಿಕೊಂಡು ಹೆತ್ತವರ ಕನಸು ನನಸು ಮಾಡಬೇಕು ಎಂದು ಕಿವಿಮಾತು ಹೇಳಿದರು.
ಹರಿಯಬ್ಬೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದರು.
ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಆರ್.ಶಿವಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ರಂಗನಾಥ್, ತಾಪಂ ಮಾಜಿ ಸದಸ್ಯ ಕೆ.ಶಂಕರಮೂರ್ತಿ, ಜಲ್ದಪ್ಪ, ಮಾರುತಿ ದರ್ಶನ್, ಏಕಾಂತಪ್ಪ, ಸಂತೋಷ್, ಗೋವಿಂದರಾಜ್ ಇತರರಿದ್ದರು.