

ವಿಜಯವಾಣಿ ಸುದ್ದಿಜಾಲ ಧಾರವಾಡ
ಕ್ರೀಡೆ ಎನ್ನುವುದು ಶಾರೀರಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಶಕ್ತಿ ಹೆಚ್ಚಿಸುವ ಶಕ್ತಿಶಾಲಿ ಸಾಧನ. ಎಲ್ಲರಲ್ಲೂ ಶಿಸ್ತು, ಸಹಕಾರ, ನೇತೃತ್ವ ಗುಣಗಳು ಹಾಗೂ ಸೋಲು ಸಹಿಸಿಕೊಳ್ಳುವ ಶಕ್ತಿ ಕ್ರೀಡೆಗಳಿಂದ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಜಿಲ್ಲಾ ಸರ್ಕಾರಿ ನೌಕರ ಸಂಘದ ನೌಕರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ಕ್ರೀಡಾಮನೋಭಾವನೆ ಇರಬೇಕು. ಕ್ರೀಡಾ ಆಸಕ್ತಿ ಬೆಳೆಸಿಕೊಳ್ಳಬೇಕು. ಕಲೆ, ಪ್ರತಿಭೆಗಳ ಬಗ್ಗೆ ಇನ್ನೂ ಹೆಚ್ಚಿನ ಪ್ರಚಾರ ಆಗಬೇಕು. ನಿಮ್ಮಲ್ಲಿರುವ ಕಲೆ, ಕೌಶಲಗಳನ್ನು ನಿಮ್ಮಷ್ಟಕ್ಕೆ ಮಾತ್ರ ಸೀಮಿತವಾಗಿ ಇಟ್ಟುಕೊಳ್ಳಬೇಡಿ ಎಂದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಪಂ ಸಿಇಒ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಡಿಡಿಪಿಐ ಎಸ್.ಎಸ್. ಕೆಳದಿಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಂ. ಹೊನಕೇರಿ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ಮೋಹನ ಶಿವನ್ನವರ, ಕೈಗಾರಿಕಾ ತರಬೇತಿ ಮತ್ತು ಉದ್ಯಮ ಇಲಾಖೆ ಜಂಟಿ ನಿರ್ದೇಶಕ ಬಸವಪ್ರಭು ಹಿರೇಮಠ, ಶಹರ ಬಿಇಒ ಅಶೋಕ ಸಿಂದಗಿ, ತಹಸೀಲ್ದಾರ ಡಾ. ಡಿ.ಎಚ್. ಹೂಗಾರ, ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು, ಇತರರು ಇದ್ದರು.
ಎಸ್.ಎಫ್. ಸಿದ್ದನಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.