ಜಾತಿ-ಮತ ಮೀರಿದ ಕ್ರೀಡಾಸ್ಫೂರ್ತಿ: ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆಶಯ

Btw_Sportsmanship
Published on

ಬಂಟ್ವಾಳ: ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ, ಬಂಟ್ವಾಳ ತಾಲೂಕು ಕೋಟಿ-ಚೆನ್ನಯ ಕ್ರೀಡೋತ್ಸವ ಸಮಿತಿ, ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಕಾರದೊಂದಿಗೆ ಭಾನುವಾರ ಬಂಟ್ವಾಳದ ಭಂಡಾರಿಬೆಟ್ಟುವಿನಲ್ಲಿ ಬಿಲ್ಲವ ಸಮಾಜದವರಿಗಾಗಿ ಆಯೋಜಿಸಿದ ಬಂಟ್ವಾಳ ತಾಲೂಕು ಮಟ್ಟದ ಕೋಟಿ-ಚೆನ್ನಯ ಕ್ರೀಡೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ, ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಚಾಲನೆ ನೀಡಿ ಶುಭ ಹಾರೈಸಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ.ಸಂಜೀವ ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದ್ದರು.

ಗೌರವ ರಕ್ಷೆ ಸ್ವೀಕರಿಸಿ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಮಾನವತೆಯೊಂದಿಗೆ ಜಾತಿ, ಮತವನ್ನು ಮೀರಿ ಕ್ರೀಡಾಸ್ಫೂರ್ತಿಯನ್ನು ಮೆರೆಯುವುದು ಇಂದಿನ ಅಗತ್ಯ ಎಂದರು. ಕ್ರೀಡಾಜ್ಯೋತಿಯನ್ನು ಪಡುಮಲೆ ಕೋಟಿ-ಚೆನ್ನಯ ಜನ್ಮಸ್ಥಾನ ಸಂಚಲನಾ ಸಮಿತಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹಸ್ತಾಂತರಿಸಿದರು. ಬಂಟ್ವಾಳ ಡಿವೈಎಸ್ಪಿ ಎಸ್.ವಿಜಯಪ್ರಸಾದ್ ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಭಾರತ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ.ಸುವರ್ಣ, ಬಿಲ್ಲವರ ಅಸೋಸಿಯೇಶನ್ ಬೆಂಗಳೂರು ಅಧ್ಯಕ್ಷ ವೇದಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟೊ, ಬೆಂಗಳೂರಿನ ಪೊಲೀಸ್ ಅಧಿಕಾರಿ ಶಾಂತಾರಾಮ ಕುಂದರ್, ಉಡುಪಿ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಉದ್ಯಮಿ ಸುನಿತ್ ಕಿಶನ್, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಮಂಗಳೂರು ಡೆಪ್ಯುಟಿ ಸುಪರಿಂಟೆಂಡೆಂಟ್ ಆಫ್ ಎಕ್ಸೆಸ್ ಗಾಯತ್ರಿ ಎಂ.ಶಿವಕುಮಾರ್, ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷೆ ವಿದ್ಯಾ ರಾಕೇಶ್, ಯಕ್ಷಗಾನ ಕಲಾವಿದ ಸೀತಾರಾಮ ಕುಮಾರ್ ಕಟೀಲ್, ಹಿರಿಯ ವಕೀಲ ಟಿ.ನಾರಾಯಣ ಪೂಜಾರಿ, ಪ್ರಮುಖರಾದ ಶೇಖರ್ ಪೂಜಾರಿ, ರತ್ನಾಕರ ಕರ್ಕೇರ, ಎ.ಕೆ.ವಸಂತ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ ಪೂಜಾರಿ, ಸಂಘದ ಉಪಾಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಜತೆಕಾರ್ಯದರ್ಶಿ ರಾಜೇಶ್ ಸುವರ್ಣ ಮಿತ್ತಬೈಲ್, ಕ್ರೀಡೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಉದ್ಯಮಿ ಸಂಜೀವ ಪೂಜಾರಿ ಬಿರ್ವ ಉಪಸ್ಥಿತರಿದ್ದರು. ಸಂಚಾಲಕ ಬೇಬಿ ಕುಂದರ್ ಸ್ವಾಗತಿಸಿದರು. ಯುವವಾಹಿನಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net