ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆವರಿಗೆ ಸನ್ಮಾನ

1blrp3
ಪ್ರೌಢಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಶಾಂತಲಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ತೋ.ಚ.ಅನಂತಸುಬ್ಬರಾಯ, ಶಿಕ್ಷಕರು ಇದ್ದರು.
Published on

ಬೇಲೂರು: ತಾಲೂಕು ಕಸಬಾ ವಲಯ ಮಟ್ಟದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶಾಂತಲಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಸಮಗ್ರ ಪ್ರಶಸ್ತಿ ಪಡೆಯುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಕಾರ್ಯದರ್ಶಿ ತೊ.ಚ.ಅನಂತಸುಬ್ಬರಾಯ ಹೇಳಿದರು.

ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗಾಗಿ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದಿಸಿ ಮಾತನಾಡಿದ ಅವರು, ಪಠ್ಯದ ಜತೆ ಪಠ್ಯೇತರ ಚಟುವಕೆಗಳಲ್ಲೂ ವಿದ್ಯಾರ್ಥಿಗಳು ಭಾಗವಹಿಸಿದಾಗ ಮಾನಸಿಕ ಹಾಗೂ ದೈಹಿಕವಾಗಿ ಬಲಾಢ್ಯರಾಗುತ್ತಾರೆ. ಅದರಲ್ಲೂ ಕ್ರೀಡೆಯಲ್ಲಿ ಭಾಗವಹಿಸಿದರೆ ಅವರಲ್ಲಿ ಸೋಲು-ಗೆಲುವಿನ ಎಲ್ಲ ಆಯಾಮಗಳಿಂದಾಗಿ ಅವರಲ್ಲಿ ಮಾನಸಿಕವಾಗಿ ವಿಕಾಸ ಹೊಂದಲು ನೆರವಿನೊಂದಿಗೆ ಶಿಸ್ತು ಕಲಿಯಲು ಸಹಕಾರಿಯಾಗುತ್ತದೆ. ನಮ್ಮ ಶಾಲೆಯಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದರು ಸಹ ಇತರ ಶಿಕ್ಷಕರು ಆತ್ಮವಿಶ್ವಾಸ ತುಂಬಿ ಪ್ರೋತ್ಸಾಹಿಸಿದ್ದರಿಂದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿಯೊಂದಿಗೆ ಶಾಲೆಗೆ ಕೀರ್ತಿ ತಂದಿದ್ದಾರೆ. ಅದೇ ರೀತಿ ತಾಲೂಕು ಮಟ್ಟದಲ್ಲೂ ಉತ್ತಮ ಸಾಧನೆ ಮಾಡುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರೆ, ಆ ವಿದ್ಯಾರ್ಥಿಗಳಿಗೆ ಗೌರವ ಧನದೊಂದಿಗೆ ಅಭಿನಂದಿಸಲಾಗುವುದು ಎಂದರು.

ಮುಖ್ಯ ಶಿಕ್ಷಕ ನಾರಾಯಣ್, ಮುಖ್ಯ ಶಿಕ್ಷಕಿ ಅಶ್ವಿನಿ, ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net