

ಅರಕಲಗೂಡು: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಂಡು ಕ್ರೀಡೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕ ಎ.ಮಂಜು ಕಿವಿಮಾತು ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ಮಲ್ಲಿಪಟ್ಟಣ ಹೋಬಳಿ ಮಟ್ಟದ ಸರ್ಕಾರಿ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳು ಓದಿನೊಂದಿಗೆ ಕ್ರೀಡಾ ಚಟುವಟಿಕೆ ಕಡೆಗೂ ಆಸಕ್ತಿ ವಹಿಸುವುದು ಸೂಕ್ತ. ಇದರಿಂದ ತಮ್ಮಲ್ಲಿರುವ ಪ್ರತಿಭೆ ಗುರುತಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಸಾಧಕರಾಗಿ ಹೊರಹೊಮ್ಮಲು ಸಾಧ್ಯವಾಗಲಿದೆ. ಹೀಗಾಗಿ ಇಂತಹ ಕ್ರೀಡಾ ಸ್ಪರ್ಧೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು.
10 ಶಾಲೆಗಳ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನಿಂಗಯ್ಯ, ದೈಹಿಕ ಶಿಕ್ಷಣ ಶಿಕ್ಷಕ ಸಂಜೀವ್, ಮುಖ್ಯ ಶಿಕ್ಷಕ ರಂಗಸ್ವಾಮಿ ಇತರರಿದ್ದರು.