ಮಾನಸಿಕ ಸ್ವಾಸ್ಥ್ಯ ಕಾಪಾಡಲು ಕ್ರೀಡೆ ಸಹಕಾರಿ

IMG-20250916-WA0122
ಅರಸೀಕೆರೆ ನಗರದ ಜೇನುಕಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಜ್ಞಾನಪ್ರಭು ಸಿದ್ದರಾಮದೇಶೀಕೇಂದ್ರ ಸ್ವಾಮೀಜಿ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಕುಭೇರಪ್ಪ, ಧರ್ಮಶೇಖರ್, ಅರುಣ್ ಕುಮಾರ್, ಮಂಜುನಾಥ್, ವಸಂತ ಕುಮಾರ್ ಇತರರಿದ್ದರು.
Published on

ಅರಸೀಕೆರೆ: ಮಾನಸಿಕ ಹಾಗೂ ಶಾರೀರಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಕ್ರೀಡೆ ನೆರವಾಗಲಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಯಳನಡು ಜ್ಞಾನಪ್ರಭು ಸಿದ್ದರಾಮದೇಶೀಕೇಂದ್ರ ಸ್ವಾಮೀಜಿ ಹೇಳಿದರು.

ನಗರದ ಜೇನುಕಲ್ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜ್ಞಾನಶ್ರೀ ಎಕ್ಸಫರ್ಟ್ ಕಾಲೇಜಿನ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿ, ಕ್ರೀಡೆಯಿಂದ ದೇಹ, ಮನಸ್ಸಿನ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ. ಹೀಗಾಗಿ ಶಾಲೆ, ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ದೈಹಿಕ ಶಿಕ್ಷಣದ ಬಗ್ಗೆ ತಾತ್ಸಾರ ತೋರಬಾರದು ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಮಾತನಾಡಿ, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಸರ್ವಾಂಗೀಣ ಬೆಳವಣಿಗೆ ಸಾಧಿಸಬಹುದು. ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಾಲೇಜು ವಿದ್ಯಾರ್ಥಿಗಳು ಸೋಲು, ಗೆಲುವನ್ನು ಸಮನಾಗಿ ಸ್ವೀಕರಿಸಿ ಕ್ರೀಡಾಸ್ಫೂರ್ತಿ ಪ್ರದರ್ಶಿಸಬೇಕು ಎಂದು ಹೇಳಿದರು.

ಪ್ರತಿಭಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಕುಭೇರಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಯಣ್ಣ, ಜ್ಞಾನಶ್ರೀ ಕಾಲೇಜು ಆಡಳಿತಾಧಿಕಾರಿ ಅರುಣ್ ಕುಮಾರ್, ಉದಯ್ ಕುಮಾರ್, ಮಂಜುನಾಥ್, ದೈಹಿಕ ಶಿಕ್ಷಣ ಪರಿವೀಕ್ಷಕ ವಸಂತ ಕುಮಾರ್, ಪ್ರಸನ್ನಕುಮಾರ್ ಶಿವಸ್ವಾಮಿ, ಜಗದೀಶ್ ಇದ್ದರು. ಮಧ್ಯಾಹ್ನ ದಿಢೀರ್ ಮಳೆಗೆ ಕ್ರೀಡಾಂಗಣದಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ಕೆಲ ಆಟೋಟಗಳನ್ನು ಮುಂದೂಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net