ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಜನ್ಮದಿನಾಚರಣೆ

24adarshkdga6
Published on

ಮಡಿಕೇರಿ ಡಿ.೨೪ : ೧೯೬೫ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಜನ್ಮದಿನಾಚರಣೆಯನ್ನು ಕೊಡವ ಮಕ್ಕಡ ಕೂಟದಿಂದ ಆಚರಿಸಲಾಯಿತು.


ನಗರದ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಶನಿವಾರ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.


ನಂತರ ಮಾತನಾಡಿದ ಅಯ್ಯಪ್ಪ ವೀರಯೋಧರ ಸ್ಮರಣೆಯ ಮೂಲಕ ಗೌರವ ಸಲ್ಲಿಸುವುದರೊಂದಿಗೆ ಪ್ರತಿಯೊಬ್ಬರು ದೇಶಾಭಿಮಾನ ಮೆರೆಯಬೇಕೆಂದು ಕರೆ ನೀಡಿದರು.


ಅಜ್ಜಮಾಡ ಕುಟುಂಬದ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಕೊಡವ ಮಕ್ಕಡ ಕೂಟದ ಸದಸ್ಯರು ಹಾಗೂ ಅಭಿಮಾನಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net