ಜಿಲ್ಲೆಯಲ್ಲಿ ಶ್ರಾವಣ ಮಾಸದ ಸಂಭ್ರಮ: ವಿಷ್ಣು ದೇವಾಲಯದಲ್ಲಿ ವಿಶೇಷ ಪೂಜೆ

Sravana Masada Pooje
Published on

ಮಂಡ್ಯ: ಶ್ರಾವಣ ಮಾಸದ ಮೊದಲ ಶನಿವಾರದ ಅಂಗವಾಗಿ ಜಿಲ್ಲೆಯ ಎಲ್ಲ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆದವು.

ತಾಲೂಕಿನ ಸಾತನೂರು ಕಂಬದ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರಾವಣ ಶನಿವಾರದ ಅಂಗವಾಗಿ ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳು ನಡೆದವು. ನರಸಿಂಹಸ್ವಾಮಿ ವಿಗ್ರಹಕ್ಕೆ ಹಲವು ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಪೂಜೆಗೆ ಆಗಮಿಸಿದ ಭಕ್ತರಿಗೆ ದೇವಾಲಯದ ಸಮಿತಿ ವತಿಯಿಂದ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿತ್ತು.

ಸಾತನೂರು ಬೆಟ್ಟ ಎಂದೇ ಹೆಸರಾಗಿರುವ ಇಲ್ಲಿ ಪ್ರತೀ ಶ್ರಾವಣ ಶನಿವಾರದಂದು ವಿಶೇಷ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಭಕ್ತರ ದಂಡು ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು. ದೇವಾಲಯ ಸಮಿತಿಯವರು ಈ ಬಾರಿ ಅನ್ನದಾಸೋಹ ಭವನ ನಿರ್ಮಿಸಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ಎಂದಿನಂತೆ ಸಹಕಾರ ನೀಡಬೇಕೆಂದು ಕೋರುತ್ತಿದ್ದರು. ನಗರದ ಮೈಸೂರು-ಬೆಂಗಳೂರು ಹೆದ್ದಾರಿ ಕಲ್ಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಬೆಳಿಗ್ಗೆಯಿಂದಲೇ ಭಕ್ತರ ದಂಡು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net