ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ

11-KGLPHOTO-3,
Published on

ಕೊಳ್ಳೇಗಾಲ: ಸಂಪಾದಿಸಿದ ಆಸ್ತಿ ಶಾಶ್ವತವಲ್ಲ. ಕಲಿತ ವಿದ್ಯೆ ಎಂದಿಗೂ ಶಾಶ್ವತ. ಹೀಗಾಗಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಎಂದು ಶ್ರೀ ಗುರುಮಲ್ಲೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷ ಶ್ರೀ ಮಹಾಂತ ಸ್ವಾಮೀಜಿ ಹೇಳಿದರು.

ಪಟ್ಟಣದ ಜಿ.ಪಿ.ಮಲ್ಲಪ್ಪಪುರ ಬಡಾವಣೆಯಲ್ಲಿರುವ ಶ್ರೀ ಗುರುಮಲ್ಲೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ 9ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಾವು ಮಕ್ಕಳಿಗೆ ಕಲಿಸಿದ ವಿದ್ಯೆ ಅವರನ್ನು ಕಾಪಾಡುತ್ತದೆ. ಆದ್ದರಿಂದ ಮಕ್ಕಳ ಶಿಕ್ಷಣಕ್ಕೆ ಪಾಲಕರು ಹೆಚ್ಚು ಪ್ರಾಮುಖ್ಯತೆ ನೀಡಬೇಕೆಂದು ತಿಳಿಸಿದರು.

ಶ್ರೀ ಗುರುಮಲ್ಲೇಶ್ವರರು ಕಾಯಕ ಯೋಗಿಗಳು. ಶಿಕ್ಷಣ ಹಾಗೂ ದಾಸೋಹಕ್ಕೆ ಒತ್ತು ನೀಡಿದ್ದರು. ಈಗ ಅವರ ಶಿಷ್ಯ ಪರಂಪರೆ ಮಠವನ್ನು ನಡೆಸುತ್ತಿದೆ. ಶ್ರೀ ಗುರುಮಲ್ಲೇಶ್ವರ ವಿದ್ಯಾಸಂಸ್ಥೆ ಬಡವರು ಹಾಗೂ ಹಿಂದುಳಿದ ಮಕ್ಕಳಿಗೆ ವಿದ್ಯೆ ಕಲಿಸುತ್ತಿದೆ ಎಂದರು. ಬಿಇಒ ಮಂಜುಳಾ ಮಾತನಾಡಿದರು. ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಮಹದೇವಪ್ರಸಾದ್, ವಿದ್ಯಾಸಂಸ್ಥೆ ಕಾರ್ಯದರ್ಶಿ ಎಚ್.ಎಂ. ವೃಷಭೇಂದ್ರ, ದಾನಿಗಳಾದ ಹಲಗೇಶ್ ಗೌಡ್ರು, ಮುಖ್ಯಶಿಕ್ಷಕಿ ಶಿವನಾಗಮ್ಮ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net