

ತುಮಕೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಐ.ಪಾಟೀಲ್ ಶುಕ್ರವಾರ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಯಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ನಂತರ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದು ಕರೊನಾ ಹಿನ್ನೆಲೆಯಲ್ಲಿ ಸರ್ಕಾರದ ಮುಂದಿರುವ ಸವಾಲುಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಮಠದ ವಿದ್ಯಾರ್ಥಿಗಳ, ವಾಸ್ತವ್ಯ ಆರೋಗ್ಯದ ಬಗ್ಗೆ ಮಠದ ಆಡಳಿತ ಮಂಡಳಿ, ಸಿಬ್ಬಂದಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಯವರ ಪರಿಹಾರ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿದ್ದಲಿಂಗ ಶ್ರೀಗಳು, ಶ್ರೀಗಳ ಪೂರ್ವಾಶ್ರಮದ ಹುಟ್ಟೂರು ವೀರಾಪುರದಲ್ಲಿ ಕೈಗೊಂಡಿರುವ ಶ್ರೀಗಳ ಪ್ರತಿಮೆ ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳನ್ನು ನಿರ್ಧರಿಸಿದ ಅವಧಿಯಲ್ಲಿ ಪೂರ್ಣಗೊಳಿಸಬೇಕೆನ್ನುವುದು ಭಕ್ತರ ಆಶಯವಾಗಿ ಎಂದು ತಿಳಿಸಿದರು.