ಬಸವ ತತ್ವದಡಿ ಜೀವನ ಸಾಗಿಸುತ್ತಿರುವ ಸಂತ

2505Aland1
ಆಳಂದ ತಾಲೂಕಿನ ಮಾದನಹಿಪ್ಪರಗಿಯಲ್ಲಿ ಹಮ್ಮಿಕೊಂಡಿದ್ದ ಶ್ರೀ ಅಭಿನವ ಶಿವಲಿಂಗ ಸ್ವಾಮಿಗಳ ಪಟ್ಟಾಧಿಕಾರದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಹತ್ತಿಕಣಮಸದ ಶ್ರೀ ಪ್ರಭುಶಾಂತಲಿAಗ ಸ್ವಾಮಿಗಳು ಮಾತನಾಡಿದರು. ಶ್ರೀ ಡಾ.ಶಾಂತಲಿಂಗ ಶಿವಾಚಾರ್ಯರು, ಶ್ರೀ ಸಿದ್ಧೇಶ್ವರ ಶಿವಾಚಾರ್ಯರು, ಶ್ರೀ ಸಿದ್ಧಲಿಂಗ ಸ್ವಾಮೀಜಿ, ಶ್ರೀ ಶ್ರೀದೇವಿ ಮಾತಾಜಿ, ಆರ್.ಕೆ.ಪಾಟೀಲ್ ಇದ್ದರು.
Published on

ಆಳಂದ: ಶ್ರೀ ಅಭಿನವ ಶಿವಲಿಂಗ ಸ್ವಾಮಿಗಳು ಸಾಮಾಜಿಕ ಕಳಕಳಿ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಶ್ರೀಮಠವನ್ನು ಮುನ್ನಡೆಸುತ್ತಿದ್ದಾರೆ. ಆಧುನಿಕ ಯುಗದಲ್ಲಿ ಬಸವಣ್ಣನ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಗುತ್ತಿರುವ ಯುವ ಸಂತರಾಗಿದ್ದಾರೆ ಎಂದು ಹತ್ತಿಕಣಮಸದ ಶ್ರೀ ಪ್ರಭುಶಾಂತಲಿಂಗ ಸ್ವಾಮೀಜಿ ಬಣ್ಣಿಸಿದರು.

ಮಾದನಹಿಪ್ಪರಗಿಯ ಶ್ರೀ ಶಿವಲಿಂಗೇಶ್ವರ ಮಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶ್ರೀ ಅಭಿನವ ಶಿವಲಿಂಗ ಸ್ವಾಮಿಗಳ ಪಟ್ಟಾಧಿಕಾರ ದಶಮಾನೋತ್ಸವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ಶ್ರೀಮಠದೊಂದಿಗೆ ಭಕ್ತರನ್ನು ಉದ್ಧರಿಸುವ ಕೆಲಸ ಮಾಡುತ್ತಿದ್ದಾರೆ. ಧರ್ಮ ಕಾರ್ಯದ ಜತೆಗೆ ಜನಪರ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಅಭಿನವ ಶಿವಲಿಂಗ ಶ್ರೀಗಳು ಗುರುಗಳ ಮಾರ್ಗದಲ್ಲೇ ಸಾಗುತ್ತಿದ್ದಾರೆ. ಹತ್ತು ವರ್ಷದಲ್ಲಿ ಕರ್ನಾಟಕ, ಮಹಾರಾಷ್ಟçದ ಗಡಿ ಭಾಗದಲ್ಲಿ ಪ್ರಸಿದ್ಧಿ ಹೊಂದಿದ್ದಾರೆ ಎಂದರು.

ಕಲಬುರಗಿ, ಬೀದರ್, ಯಾದಗಿರಿ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಆರ್.ಕೆ.ಪಾಟೀಲ್ ಮಾತನಾಡಿ, ಪುಟ್ಟ ಗ್ರಾಮದಲ್ಲಿನ ಶ್ರೀಗಳು ಇದೀಗ ಇಡೀ ಜಿಲ್ಲೆಯಲ್ಲಿಯೇ ಮನೆ ಮಾತಾಗಿದ್ದಾರೆ. ಜನಸಾಮಾನ್ಯರು ಹಾಗೂ ಭಕ್ತರ ಒಳಿತಿಗಾಗಿ ನಿರಂತರ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ದುಧನಿಯ ಶ್ರೀ ಡಾ.ಶಾಂತಲಿಂಗ ಸ್ವಾಮೀಜಿ, ಯಡ್ರಾಮಿಯ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಆಳಂದ ಹಿರೇಮಠದ ಶ್ರೀ ಸಿದ್ಧೇಶ್ವರ ಶಿವಾಚಾರ್ಯರು, ಶ್ರೀ ಶ್ರೀದೇವಿ ಮಾತಾಜಿ, ಮಠದ ಕಾರ್ಯದರ್ಶಿ ಸಿದ್ದರಾಮ ಅರಳಿಮಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net