

ಅರಕಲಗೂಡು: ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಅಮೃತೇಶ್ವರಸ್ವಾಮಿ ಮಹಾರಥೋತ್ಸವ ಶನಿವಾರ ವಿಜೃಂಭಣೆಯಿಂದ ನೆರವೇರಿತು.
ರಥೋತ್ಸವ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು. ಬಳಿಕ ಉತ್ಸವ ಮೂರ್ತಿಗಳನ್ನು ಅಲಂಕರಿಸಿ ಕೃಷ್ಣಗಂಧೋತ್ಸವ ನಡೆಸಲಾಯಿತು. ದೇವರ ಮೂರ್ತಿಗಳನ್ನು ಅಲಂಕರಿಸಿದ್ದ ರಥದಲ್ಲಿ ಪ್ರತಿಷ್ಠಾಪಿಸಿ ಪೂಜಿಸಲಾಯಿತು.
ಶಾಸಕ ಎ.ಟಿ. ರಾಮಸ್ವಾಮಿ ರಥಕ್ಕೆ ಪೂಜೆ ಸಲ್ಲಿಸಿ ಈಡುಗಾಯಿ ಒಡೆದು ಉತ್ಸವಕ್ಕೆ ಚಾಲನೆ ನೀಡಿದರು. ನೆರೆದಿದ್ದ ನೂರಾರು ಭಕ್ತರು ಶಿವನಾಮ ಸ್ಮರಣೆ ಮಾಡುತ್ತಾ ರಥ ಬೀದಿಯಲ್ಲಿ ತೇರನ್ನು ಎಳೆದು ಸಂಭ್ರಮಿಸಿದರು.
ಮಂಗಳವಾದ್ಯ, ಗಾರುಡಿ ಗೊಂಬೆ, ತಮಟೆ ವಾದ್ಯ ಮುಂತಾದ ಕಲಾತಂಡಗಳು ಉತ್ಸವಕ್ಕೆ ಮೆರುಗು ನೀಡಿದವು. ತೇರು ಎಳೆಯುತ್ತಿದ್ದ ಭಕ್ತರಿಗೆ ಸಾರ್ವಜನಿಕರು ಪಾನಕ, ಮಜ್ಜಿಗೆ ಮುಂತಾದ ತಂಪು ಪಾನೀಯಗಳನ್ನು ನೀಡಿ ದಾಹ ತಣಿಸಿದರು. ರಾತ್ರಿ ಶಾಂತೋತ್ಸವ