ಶ್ರೀ ಬಸವೇಶ್ವರಸ್ವಾಮಿ ಪೂಜಾ ಮಹೋತ್ಸವ ಸಂಪನ್ನ

7ss1addapalaki meravanige
ಮುಳ್ಳೂರು ಗ್ರಾಮದ ಬಸವೇಶ್ವರಸ್ವಾಮಿ ದೇವರ ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಅಡ್ಡಪಲ್ಲಕ್ಕಿ ಮೆರವಣಿಗೆ ಸಾಗುತ್ತಿರುವುದು.
Published on

ಶನಿವಾರಸಂತೆ: ಸಮೀಪದ ಮುಳ್ಳೂರು ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ದೇವರ ವಾರ್ಷಿಕ ಪೂಜಾ ಮಹೋತ್ಸವ ಮಂಗಳವಾರ ಸಂಪನ್ನಗೊಂಡಿತು.

ಪೂಜಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ 6 ಗಂಟೆಗೆ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿ ಕೂರಿಸಿ ಮುಳ್ಳೂರು ಜಂಕ್ಷನ್‌ನಲ್ಲಿರುವ ಅರಳಿಕಟ್ಟೆಗೆ ತರಲಾಯಿತು. ನಂತರ ಅರಳಿಕಟ್ಟೆಯಲ್ಲಿ ಕಳಸಪೂಜೆ ಸಲ್ಲಿಸಿದ ನಂತರ ಕಳಸಹೊತ್ತ ಮಹಿಳೆಯರು, ಭಕ್ತಾದಿಗಳು, ಗ್ರಾಮಸ್ಥರು ವಾದ್ಯಗೋಷ್ಠಿಯೊಂದಿಗೆ ಶ್ರೀ ಬಸವೇಶ್ವರಸ್ವಾಮಿ ದೇವರನ್ನು ಅಡ್ಡಪಲ್ಲಕ್ಕಿ ಮೆರವಣಿಗೆ ಮೂಲಕ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ದೇವಸ್ಥಾನಕ್ಕೆ ತರಲಾಯಿತು. ನಂತರ ಅರ್ಚಕರು ದೇವಸ್ಥಾನದಲ್ಲಿ ಶ್ರೀ ಬಸವೇಶ್ವರಸ್ವಾಮಿಗೆ ವಿಶೇಷ ಪೂಜೆ ವಿಧಿವಿಧಾನವನ್ನು ನೆರವೇರಿಸಿದರು.

ಸೋಮವಾರ ರಾತ್ರಿ 9 ಗಂಟೆಯಿಂದ ಮಂಗಳವಾರ ಮುಂಜಾನೆ 5 ಗಂಟೆವರೆಗೆ ಶ್ರೀ ಬಸವೇಶ್ವರಸ್ವಾಮಿಯ ವಾರ್ಷಿಕ ಪೂಜಾ ಮಹೋತ್ಸವ ನಡೆಯಿತು. ಬೆಳಗ್ಗೆ 6 ಗಂಟೆಗೆ ದೇವಸ್ಥಾನ ಮುಂಭಾಗ ಕೊಂಡೋತ್ಸವದೊಂದಿಗೆ ಪೂಜಾ ಮಹೋತ್ಸವ ಸಂಪನ್ನಗೊಂಡಿತು. ಅರ್ಚಕ ಶಾಂತರಾಜ್ ನೇತೃತ್ವದಲ್ಲಿ ಅರ್ಚಕರ ತಂಡ ಪೂಜಾ ಕಾರ್ಯವನ್ನು ನೆರವೇರಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net