ಶ್ರೀ ಭಗೀರಥ ಜಯಂತಿ ಪೂರ್ವಭಾವಿ ಸಭೆ

raichur
raichur
Published on

ರಾಯಚೂರು ಇಲ್ಲಿನ ಜಿ¯್ಲÁಡಳಿತ, ಜಿ¯್ಲÁ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮೇ.೦೪ರಂದು ಶ್ರೀ ಭಗೀರಥ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಆಚರಣೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಅಪರ ಜಿ¯್ಲÁಽಕಾರಿಗಳಾದ ಶಿವಾನಂದ ಅವರು ಸಂಬAಽಸಿದ ಅಽಕಾರಿಗಳಿಗೆ ಸೂಚಿಸಿದರು.

ಇತ್ತಿಚೇಗೆ ನಗರದ ನೂತನ ಜಿ¯್ಲÁಽಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆ ಅಂಗವಾಗಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದಿಂದ ಆಚರಿಸಲಾಗುವ ಭಗೀರಥ ಜಯಂತಿಯನ್ನು ಆಯೋಜಿಸಲು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು. ಹೆಚ್ಚಿನ ಜನರು ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಏರ್ಪಾಡುಗಳನ್ನು ಕೈಗೊಳ್ಳಬೇಕೆಂದು ಸಂಬAಽಸಿದ ಅಽಕಾರಿಗಳಿಗೆ ತಿಳಿಸಿದರು.

ಕಳೆದ ಬಾರಿ ಭಗೀರಥ ಜಯಂತಿಯನ್ನು ಅತ್ಯಂತ ಅದ್ಧೂರಿಯಾಗಿ ಆಚರಣೆ ಮಾಡಲಾಗಿದೆ. ಈ ಬಾರಿಯೂ ಇನ್ನಷ್ಟು ಉತ್ತಮವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಆಹ್ವಾನ ಪತ್ರಿಕೆ ಮುದ್ರಿಸಿ ವಿತರಣೆಗೆ ಕ್ರಮವಹಿಸಿಬೇಕು. ವೇದಿಕೆಯನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಿ ಹೂ ಅಲಂಕಾರ ಮಾಡಬೇಕು. ಹೆಚ್ಚು ಜನರು ಕುಳಿತು ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ಶಾಮಿಯಾನ, ಆಸನದ ವ್ಯವಸ್ಥೆಗಳನ್ನು ಮಾಡಬೇಕು. ಜಯಂತಿ ಕಾರ್ಯಕ್ರಮದಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಬೇಕೆಂದು ರಾಯಚೂರು ಮಹಾನಗರ ಪಾಲಿಕೆಯ ಅಽಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗೂರು, ಉಪ್ಪಾರ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ದೇವೇಂದ್ರಪ್ಪ ಉಪ್ಪಾರ ಸಮಾಜದ ಅಧ್ಯಕ್ಷ ಪಾಗುಂಟಪ್ಪ ಮಿಜÁðಪುರ , ಬಾಲಚೇಡ ವೆಂಕೋಬ , ಎಂ.ಚAದ್ರಶೇಖರ್ ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net