

*
ಚಿತ್ರದುರ್ಗ: ಹೊಸದುರ್ಗ ಭಗೀರಥ ಗುರುಪೀಠದಲ್ಲಿ ನ.29 ಕ್ಕೆ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ 54 ನೇ ಜನ್ಮದಿನೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಪ್ಪಾರ ಸಂಘದ ಗೌರವಾಧ್ಯಕ್ಷ ಎಸ್.ನಾಗರಾಜ್ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನ್ಮದಿನೋತ್ಸವದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತರಿಗೆ ಪ್ರಶಸ್ತಿ ಪುರಸ್ಕಾರ ಆಯೋಜಿಸಲಾಗಿದೆ. ಅರ್ಹರು 25 ರೊಳಗೆ ಗುರುಪೀಠಕ್ಕೆ ಆಧಾರ್, ಅಂಕಪಟ್ಟಿಯ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಅಂದು ಹೋಮ, ಹವನ ಸೇರಿ ಧಾರ್ಮಿಕ ಆಚರಣೆ ನಡೆಯಲಿದೆ. ಅಖಿಲ ಭಾರತ ಭಗೀರಥ ಸಾಹಿತ್ಯ ಪರಿಷತ್ ಪುಸ್ತಕ ಬಿಡುಗಡೆ ಆಗಲಿದೆ ಎಂದರು.
ಜಿಲ್ಲಾಧ್ಯಕ್ಷ ಎನ್.ವೀರೇಶ್, ಪ್ರಧಾನ ಕಾರ್ಯದರ್ಶಿ ಎಲ್.ಮಹೇಶ್, ಖಜಾಂಚಿ ಎಚ್.ಅಜ್ಜಪ್ಪ, ತಾಲೂಕಾಧ್ಯಕ್ಷ ಸಿದ್ದಪ್ಪ, ಸಂಘಟನಾ ಕಾರ್ಯದರ್ಶಿ ಎನ್.ತಿಪ್ಪೇಸ್ವಾಮಿ ಇತರರಿದ್ದರು.