

ಶ್ರೀ ಚಾಮರಾಜೇಂದ್ರ ಸ್ಕೂಲ್ ಫಾರ್ ಎಕ್ಸೆಲೆನ್ಸ್ ಶಾಲೆಯಲ್ಲಿ ಮಂಗಳವಾರ ಸ್ವಾತಂತ್ರೃ ದಿನವನ್ನು ಆಚರಿಸಲಾಯಿತು.
ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಪಾಲಕರ ಸಮ್ಮುಖದಲ್ಲಿ ಶ್ರೀ ಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್ ಸದಸ್ಯ ಬಿ.ಪಿ.ಬಾಲಚಂದ್ರ ಅರಸ್ ಧ್ವಜಾರೋಹಣ ನೆರವೇರಿಸಿದರು.
ಬಿ.ಪಿ.ಬಾಲಚಂದ್ರ ಅರಸ್ ಮಾತನಾಡಿ, ನಮ್ಮ ದೇಶ ಮುಂದುವರಿಯುತ್ತಿರುವ ರಾಷ್ಟ್ರವಾಗಿದ್ದು, ಅದನ್ನು ನಾವು ಗೌರವಿಸಬೇಕು. ನಮ್ಮ ಪರಿಸರವನ್ನು ಸ್ವಚ್ಛವಾಗಿಡಬೇಕು. ಸ್ವಚ್ಛ ಭಾರತ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ತಿಳಿಸಿದರು. ಶಾಲೆಯ ಉಪಾಧ್ಯಕ್ಷೆ ಡಾ.ಭಾರತಿ ಶ್ರೀಧರ್‌ರಾಜ ಅರಸ್ ಮಾತನಾಡಿ, ಸ್ವಾತಂತ್ರೃ ಭಾರತದ ಅಭಿವೃದ್ಧಿ, ಸ್ವಾತಂತ್ರೃ ಹೋರಾಟಗಾರರ ಕುರಿತು ತಿಳಿಸಿಕೊಟ್ಟರು.
ವಿದ್ಯಾರ್ಥಿಗಳು ನೀಡಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.