ಶ್ರೀ ಚಂದ್ರಶೇಖರ ಸ್ವಾಮೀಜಿ ಸಾಧನೆ ಅದ್ವಿತೀಯ : ಹರೀಶ್ ಹೆಜ್ಮಾಡಿ ಬಣ್ಣನೆ

New Project (32)
Published on

ವಿಜಯವಾಣಿ ಸುದ್ದಿಜಾಲ ಮೂಲ್ಕಿ

ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಅವರ ಸಾಧನೆ ಅದ್ವಿತೀಯ. ಅಂತಾರಾಷ್ಟ್ರೀಯಮಟ್ಟದಲ್ಲಿ ಗುರುತಿಸಿ ಕೊಂಡಿರುವ ಅವರು ಮೂಲ್ಕಿಯ ಹೆಮ್ಮೆಯ ಪುತ್ರ. ನಾನಾ ದೇಶಗಳ ಅಧ್ಯಕ್ಷರು, ಪ್ರಧಾನಮಂತ್ರಿಗಳು, ರಾಜರಿಗೆ ಗುರುಗಳಾಗಿದ್ದು, ಅವರ ಹೆಸರಿನಲ್ಲಿ ನಡೆಯುವ ನಿರಂತರ ಸಮಾಜ ಸೇವೆಗಳು ಅಭಿನಂದನೀಯ ಎಂದು ಕಾಪು ಪ್ರೆಸ್‌ಕ್ಲಬ್ ಅಧ್ಯಕ್ಷ ಹರೀಶ್ ಹೆಜ್ಮಾಡಿ ಹೇಳಿದರು.

ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಹುಟ್ಟುಹಬ್ಬ ಅಂಗವಾಗಿ ಶನಿವಾರ ಆಯೋಜಿಸಲಾದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಿಲ್ಪಾಡಿ ಶ್ರೀ ಚಂದ್ರಶೇಖರ ಸ್ವಾಮೀಜಿ ಅಶ್ರಮ ಸಂಚಾಲಕ ಪುನೀತ್‌ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಮೂಲ್ಕಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್‌ಸ್ಪೈರ್ ಅಧ್ಯಕ್ಷ ಶಿವಪ್ರಸಾದ್ ಭಟ್, ಸಿಎಸ್‌ಐ ಬಾಲಿಕಾಶ್ರಮದ ವಾರ್ಡನ್ ಶಾಂತಿ ಮುಖ್ಯ ಅತಿಥಿಗಳಾಗಿದ್ದರು. ಪತ್ರಕರ್ತ ನರೇಂದ್ರ ಕೆರೆಕಾಡು ಶ್ರೀ ಚಂದ್ರಶೇಖರ ಸ್ವಾಮೀಜಿ ಕುರಿತು ಪ್ರಸ್ತಾವಿಕ ಮಾತನಾಡಿದರು.

ಮೂಲ್ಕಿ ಸಿಎಸ್‌ಐ ಬಾಲಿಕಾಶ್ರಮದ ವಿದ್ಯಾರ್ಥಿನಿಯರಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಿಂದ ಪಠ್ಯ ಪರಿಕರ ಕೊಡುಗೆಗಳನ್ನು ವಿತರಿಸಲಾಯಿತು. ವಿದ್ಯಾರ್ಥಿನಿಯರು ಶ್ರೀ ಚಂದ್ರಶೇಖರ ಸ್ವಾಮೀಜಿ ಅವರೊಂದಿಗೆ ವೀಡಿಯೋ ಕಾಲ್ ಮೂಲಕ ಮಾಹಿತಿ ಹಾಗೂ ಹುಟ್ಟುಹಬ್ಬದ ಶುಭಾಶಯಗಳನ್ನು ಹಂಚಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net