

ವಿಜಯವಾಣಿ ಸುದ್ದಿಜಾಲ ಧಾರವಾಡ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಗರದ ಮರಾಠಾ ವಿದ್ಯಾಪ್ರಸಾರಕ ಮಂಡಳದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಕಲಾ ವಿಭಾಗದಲ್ಲಿ ರಾಣಿ ಬಿ. ಸೋನಪ್ಪನವರ್ 524 ಅಂಕ ಪಡೆದು ಪ್ರಥಮ, ಕಿಶನ್ ಬಿ.ಎ. 483 ಅಂಕ ದ್ವಿತೀಯ, ವಿನಯ ಎನ್. ಸತ್ತೂರ 468 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾನೆ.
ವಾಣಿಜ್ಯ ವಿಭಾಗದಲ್ಲಿ ಪ್ರವೀಣ ಬಿ. ಮರೆದ 546 ಅಂಕ ಪಡೆದು ಪ್ರಥಮ, ದೀಪಾ ಜೆ. ತುಕ್ಕಾಯಿ 545 ಅಂಕ ದ್ವಿತೀಯ, ಸೌಂದರ್ಯ ಎಂ. ಕದಂ 536 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾಳೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಎಂ.ಎನ್ . ಮೋರೆ, ಉಪಾಧ್ಯಕ್ಷ ಯಲ್ಲಪ್ಪ ಚೌಹಾಣ, ಗೌರವ ಕಾರ್ಯದರ್ಶಿ ರಾಜು ಬಿರಜೇನವರ, ಸಹ ಕಾರ್ಯದರ್ಶಿ ಮಲ್ಲೇಶಪ್ಪ ಶಿಂಧೆ, ನಿರ್ದೇಶಕರು ಅಭಿನಂದಿಸಿದ್ದಾರೆ.