

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕವಾಗಿ ನಡೆಯುವ ವಿಷುಮಾಸದ ಜಾತ್ರೆ ರದ್ದುಪಡಿಸಲಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ. ಸಾಂಪ್ರದಾಯಿಕವಾಗಿ ನಡೆಯುವ ಧರ್ಮದೇವತೆಗಳ, ಅಣ್ಣಪ್ಪ ಸ್ವಾಮಿಯ ನೇಮ-ಕೋಲ, ಶ್ರೀಮಂಜುನಾಥ ಸ್ವಾಮಿಯ ರಥೋತ್ಸವ, ಕಟ್ಟೆ ವಿಹಾರ, ಅವಭೃತ ವಿಹಾರವನ್ನು ಸ್ಥಗಿತಗೊಳಿಸಲಾಗಿದೆ.
ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ, ದರ್ಶನವನ್ನು ಮುಂದಿನ ಸೂಚನೆ ತನಕ ರದ್ದುಪಡಿಸಲಾಗಿದೆ. ದೇವಪ್ರಶ್ನೆಯ ಮೂಲಕ ಶ್ರೀಸ್ವಾಮಿಯ ಒಪ್ಪಿಗೆ ಪಡೆದು ಪರಿವರ್ತನೆ ಗೊಂಡಿರುವುದರಿಂದ ಭಕ್ತರು ಯಾವುದೇ ಸಂಕೋಚ ಪಡಬೇಕಾಗಿಲ್ಲ. ಭಕ್ತರು ಕರೊನಾ ಸೋಂಕು ರೋಗ ಮುಕ್ತಿಗಾಗಿ ಪ್ರಾರ್ಥನೆ ಮಾಡಿ ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಮುಂದಿನ ದಿನಗಳ ಸುಭಿಕ್ಷೆಗಾಗಿ ಸರ್ಕಾರದ ಆದೇಶಗಳನ್ನು ಪರಿಪಾಲಿಸಬೇಕು ಎಂದು ತಿಳಿಸಿದ್ದಾರೆ.