ಶ್ರೀ ಗೋಪಾಲಕೃಷ್ಣ ಮೂರ್ತಿ ಬಾಲಾಲಯದಲ್ಲಿ ಪ್ರತಿಷ್ಠಾಪನೆ

ಶ್ರೀ ಗೋಪಾಲಕೃಷ್ಣ ಮೂರ್ತಿ ಬಾಲಾಲಯದಲ್ಲಿ ಪ್ರತಿಷ್ಠಾಪನೆ
Published on

ನಾಪೋಕ್ಲು: ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಪ್ರಯುಕ್ತ ದೇವರ ವಿಗ್ರಹವನ್ನು ಭಾನುವಾರ ಶ್ರದ್ಧಾ ಭಕ್ತಿಯಿಂದ ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು.

ಮದೆನಾಡು ಗ್ರಾಮ ಪಂಚಾಯತಿಯ ಅವಂದೂರು ಗ್ರಾಮದ ಗ್ರಾಮ ದೇವರಾಗಿ ಆರಾಧಿಸಲ್ಪಟ್ಟ ಗೋಪಾಲಕೃಷ್ಣ ದೇವರ ಸಾನ್ನಿಧ್ಯದ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸುವ ದೃಷ್ಟಿಯಿಂದ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದೊಂದಿಗೆ ಮರುಪ್ರತಿಷ್ಠಾಪನೆ ಮಾಡುವ ತೀರ್ಮಾನವನ್ನು ಸಮಿತಿ ಕೈಗೊಂಡಿದೆ.

ದೇವಸ್ಥಾನದ ಗರ್ಭಗುಡಿಯಿಂದ ದೇವರ ಮೂರ್ತಿಯನ್ನು ಸಕಲ ವಿಧಿ ವಿಧಾನದೊಂದಿಗೆ ಬಾಲಾಲಯಕ್ಕೆ ಸ್ಥಳಾಂತರ ಮಾಡುವ ವಿಶೇಷ ಪೂಜಾ ಕೈಂಕರ್ಯಗಳು ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದೊಂದಿಗೆ ಭಾನುವಾರ ನೆರವೇರಿತು.

ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕಡ್ಯದ ಸೋಮಣ್ಣ, ಉಪಾಧ್ಯಕ್ಷ ಚೊಕ್ಕಾಡಿ ಅಪ್ಪಯ್ಯ, ಕಾರ್ಯದರ್ಶಿ ಪಟ್ಟಡ ಸುಗುಣ ಕುಮಾರ್, ಖಜಾಂಚಿ ಬೆಳ್ಯನ ಚಂದ್ರಪ್ರಕಾಶ್, ಅರ್ಚಕ ದಿನೇಶ್ ಭಟ್, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ದೇವಸ್ಥಾನ ಜೀರ್ಣೋದ್ಧಾರದ ಮೂಲ ಸಮಿತಿ, ಗ್ರಾಮದ ತಕ್ಕ ಮುಖ್ಯಸ್ಥರು, ಗ್ರಾಮದ ಕಾರ್ಯದರ್ಶಿ, ಅವಂದೂರಿನ ಗ್ರಾಮಸ್ಥರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net