

ತಿ.ನರಸೀಪುರ: ಕಡೇ ಶ್ರಾವಣ ಮಾಸದ ಪ್ರಯುಕ್ತ ಶನಿವಾರ ಪಟ್ಟಣದಲ್ಲಿ ಶ್ರೀ ಮಹಾಲಕ್ಷ್ಮೀ ಸಮೇತ ಶ್ರೀ ಗುಂಜಾ ನರಸಿಂಹಸ್ವಾಮಿ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಾಲಯದಲ್ಲಿ ಕೊನೆಯ ಶ್ರಾವಣದ ಹಿನ್ನೆಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ಉತ್ಸವದಲ್ಲಿ ಶ್ರೀ ಮಹಾಲಕ್ಷ್ಮೀ ಸಮೇತ ಶ್ರೀ ಗುಂಜಾ ನರಸಿಂಹಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣದ ಪ್ರಮುಖ ರಥದ ಬೀದಿಗಳಲ್ಲಿ ಮೆರವಣಿಗೆ ಮಾಡಿದ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಬೆಳಗ್ಗೆಯಿಂದಲೇ ದೇವಾಲಯಕ್ಕೆ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿ, ಇಷ್ಟಾರ್ಥ ನೆರವೇರಿಸುವಂತೆ ಪ್ರಾರ್ಥಿಸಿದರು. ಅರ್ಚಕರಾದ ಶ್ರೀಧರ್ ಭಟ್ಟ, ವೆಂಕಟೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಕನ್ನಡ ಪುಟ್ಟಸ್ವಾಮಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹಾಗೂ ರಾಜ್ಯ ಕಾರ್ಯದರ್ಶಿ ಎಂ.ವಿ.ಶಿವಶಂಕರಮೂರ್ತಿ, ನಾಗಣ್ಣ, ಸಮಾಜ ಸೇವಕ ಮಾದೇಶ್, ರಾಜೇಶ್, ವರದರಾಜು, ಅರ್ಜುನ್, ದೇವಾಲಯದ ತಿರುಮಕೂಡಲು ದೀಪು, ರಾಘು ಸೇರಿದಂತೆ ಇತರರು ಇದ್ದರು.