ಶ್ರೀ ಕಂಠಿ ಬಸವೇಶ್ವರ ಸ್ವಾಮಿ ರಥೋತ್ಸವ ಸಂಪನ್ನ

Nandihalli Jatre
Published on

ಹೂವಿನಹಡಗಲಿ: ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಶ್ರೀ ಕಂಠಿ ಬಸವೇಶ್ವರ ಸ್ವಾಮಿಯ ರಥೋತ್ಸವ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಸಂಜೆ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ತಂದು ರಥದ ಸುತ್ತ ಪ್ರದಕ್ಷಿಣೆ ಹಾಕಿ, ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಸ್ವಾಮಿಯ ರಥವು ಪಾದಕಟ್ಟೆವರೆಗೂ ಸಾಗಿ ಮೂಲ ಸ್ಥಾನಕ್ಕೆ ಮರಳಿತು. ಹರಕೆ ಹೊತ್ತ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.

ಸೋಗಿ, ಹೊಳಗುಂದಿ, ಉತ್ತಂಗಿ, ಮಲ್ಲನಕೆರಿ, ಇಟ್ಟಿಗಿ ಹಾಗೂ ಇತರ ಭಾಗಗಳಿಂದ ಭಕ್ತರು ಆಗಮಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net